ಹೊಂಬಾಳೆ

ರಿಷಬ್ – ಹೊಂಬಾಳೆ ನಡುವೆ ಬಿರುಕು?

ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಹೊಂಬಾಳೆ ಫಿಲಂಸ್ ನಡುವೆ ಬಿರುಕು ಮೂಡಿದೆ ಎನ್ನುವ ಸಂದೇಹ ಉಂಟಾಗಿದೆ.

‘ಕಾಂತಾರ’ ಸಿನಿಮಾ ಬಿಡುಗಡೆಯಾಗಿ 4 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ  ಸಾಮಾಜಿಕ ಜಾಲತಾಣ ಖಾತೆಯಲ್ಲಿ  ಪೋಸ್ಟ್ ಹಂಚಿಕೊಂಡಿದ್ದರು. ‘ಕಾಂತಾರ’ ಸಿನಿಮಾ ತಮ್ಮ ಪಾಲಿಗೆ ಕೇವಲ ಸಿನಿಮಾವಲ್ಲ.  ಬದುಕಿದ ಪ್ರಪಂಚ’  ಎಂದು ರಿಷಬ್ ಶೆಟ್ಟಿ ಬರೆದುಕೊಂಡಿದ್ದರು. ಆದರೆ ಈ ಪೋಸ್ಟ್‌ನಲ್ಲಿ ಹೊಂಬಾಳೆ ಫಿಲಂಸ್‌ನ ಲೋಗೋ ಕಾಣಿಸದಿರುವುದು ಹಾಗೂ ನಿರ್ಮಾಣ ಸಂಸ್ಥೆಯನ್ನು ಟ್ಯಾಗ್ ಮಾಡದಿರುವುದು  ಚರ್ಚೆಗೆ ಕಾರಣವಾಗಿದೆ.

ಇದರ ಬೆನ್ನಲ್ಲೇ ಹೊಂಬಾಳೆ ಫಿಲಂಸ್  ‘ಕಾಂತಾರ ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ. ಪೋಸ್ಟ್‌ನಲ್ಲಿ ರಿಷಬ್ ಶೆಟ್ಟಿ ಅವರ ಫೋಟೋ ಅಥವಾ ಹೆಸರನ್ನು ಬಳಸದೇ ‘1 YEAR OF Divine Blockbuster #KantaraChapter1’ ಎಂಬ ಬರಹದೊಂದಿಗೆ ಹುಲಿಯ ಚಿತ್ರವನ್ನು ಬಳಸಲಾಗಿದೆ.  ಪೋಸ್ಟ್‌ನಲ್ಲಿ ರಿಷಬ್ ಶೆಟ್ಟಿ ಅವರನ್ನು ಟ್ಯಾಗ್ ಮಾಡದಿರುವುದೂ ಗಮನ ಸೆಳೆದಿದೆ.

ಈ ಬೆಳವಣಿಗೆಗಳ ಮೇಲೆ ರಿಷಬ್ ಶೆಟ್ಟಿ ಮತ್ತು ಹೊಂಬಾಳೆ ಫಿಲಂಸ್  ನಡುವೆ  ಭಿನ್ನಾಭಿಪ್ರಾಯ ಇದೆಯೇ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ.  ಇಬ್ಬರ ನಡುವೆ ಎಲ್ಲವೂ ಸರಿಯಾಗಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳ ವಲಯದಲ್ಲಿ ಕೇಳಿ ಬರುತ್ತಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!