ಕಂಗನಾ ರಣಾವತ್ ಅವರು ತಮ್ಮ ನಿರ್ದೇಶನದ ʻಎಮರ್ಜೆನ್ಸಿʼ ಸಿನಿಮಾ ಬಿಡುಗಡೆ ಮುಂದೂಡುವುದಾಗಿ ಘೋಷಿಸಿದ್ದಾರೆ.
ಈ ಹಿಂದೆ ನವೆಂಬರ್ 24ರಂದು ‘ಎಮರ್ಜೆನ್ಸಿ’ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಲಾಗಿತ್ತು. ಪ್ರೊಡಕ್ಷನ್ ಬ್ಯಾನರ್ ಮಣಿಕರ್ಣಿಕಾ ಫಿಲ್ಮ್ಸ್ ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಹೊಸ ಅಪ್ಡೇಟ್ ಹಂಚಿಕೊಂಡಿದೆ.
‘ದೇಶಕ್ಕೆ ನನ್ನ ಕರ್ತವ್ಯ ಮತ್ತು ಸೇವೆ ಸಲ್ಲಿಸುವ ನನ್ನ ಬದ್ಧತೆಗೆ ಆದ್ಯತೆ ನೀಡುತ್ತಿರುವುದರಿಂದ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಕಂಗನಾ ಘೋಷಿಸಿದ್ದಾರೆ. ಕಂಗನಾ ಈ ಬಾರಿ ತಮ್ಮ ತವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಸಿನಿಮಾ ಬಿಡುಗಡೆ ಮುಂದೂಡಲಾಗಿದೆ.
”ಹೊಸ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಅನೌನ್ಸ್ ಮಾಡಲಿದ್ದೇವೆ. ನಿಮ್ಮ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳುʼʼಎಂದು ಮಣಿಕರ್ಣಿಕಾ ಫಿಲ್ಮ್ಸ್ ಬರೆದುಕೊಂಡಿದೆ.
ಸಿನಿಮಾದಲ್ಲಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಾತ್ರವನ್ನು ಶ್ರೇಯಸ್ ತಲ್ಪಡೆ ನಿರ್ವಹಿಸಲಿದ್ದಾರೆ.
Be the first to comment