‘ಎಮರ್ಜೆನ್ಸಿ’ ರಿಲೀಸ್ ಗೆ ಡೇಟ್ ಫಿಕ್ಸ್

ಬಿಜೆಪಿ ಸಂಸದೆ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’  ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತ ಸಿನಿಮಾದಲ್ಲಿ ಕಂಗನಾ ಇಂದಿರಾಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ.  ಕಂಗನಾ ತಮ್ಮ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾ ಲೋಕಸಭೆ ಚುನಾವಣೆಗೂ ಮುನ್ನ ತೆರೆ ಕಾಣಬೇಕಿತ್ತು ಆದರೆ ಚುನಾವಣೆ ಹಿನ್ನೆಲೆ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿತ್ತು. ಸಿನಿಮಾ ಸೆಪ್ಟಂಬರ್ 6 ರಂದು ತೆರೆ ಕಾಣಲಿದೆ.

ಸಿನಿಮಾದ ಬಿಡುಗಡೆ ಕುರಿತು ಕಂಗನಾ ರಣಾವತ್ ತಮ್ಮ ಟ್ವಿಟರ್ ಖಾತೆಯಲ್ಲಿ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ‘ಭಾರತ ಪ್ರಜಾಪ್ರಭುತ್ವದ ಕರಾಳ ಅಧ್ಯಾಯಕ್ಕೆ 50 ವರ್ಷದ ಹಿನ್ನೆಲೆ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆಯ ದಿನಾಂಕವನ್ನು ಘೋಷಿಸುತ್ತಿದ್ದೇನೆ’ ಎಂದು ಬರೆದು ಕೊಂಡಿದ್ದಾರೆ.

ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!