ಸಂಸದೆ, ನಟಿ ಕಂಗನಾ ರಣಾವತ್ ನಿರ್ದೇಶಿಸಿ ನಟಿಸಿರುವ ‘ಎಮರ್ಜೆನ್ಸಿ’ ಚಿತ್ರ ಸೆಪ್ಟೆಂಬರ್ 6ರಂದು ತೆರೆಗೆ ಬರುತ್ತಿದೆ.
ಈ ಕುರಿತು ಕಂಗನಾ ರನೌತ್ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಕಂಗನಾ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಝೀ ಸ್ಟುಡಿಯೋಸ್ ಮತ್ತು ಮಣಿಕರ್ಣಿಕಾ ಫಿಲ್ಮ್ಸ್ನಡಿ ಚಿತ್ರ ನಿರ್ಮಾಣಗೊಂಡಿದೆ. ಚಿತ್ರದಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಡೆ, ವಿಶಾಖ್ ನಾಯರ್ ಸೇರಿದಂತೆ ಹಲವು ಕಲಾವಿದರು ಕಾಣಿಸಿಕೊಂಡಿದ್ದಾರೆ.
ಝೀ ಸ್ಟುಡಿಯೋಸ್ ಯುಟ್ಯೂಬ್ ಚಾನೆಲ್ನಲ್ಲಿ ಆಗಸ್ಟ್ 14ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ವೀಕ್ಷಣೆಯಾಗಿದೆ. ಸಂಚಿತ್ ಬಲ್ಹಾರಾ ಸಂಗೀತ, ರಿತೇಶ್ ಶಾ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.
ಈ ಚಿತ್ರ ವಿವಾದಗಳಿಂದ ಸುತ್ತುವರಿದಿದ್ದು, ಸಿನಿಮಾವನ್ನು ಬ್ಯಾನ್ ಮಾಡಬೇಕೆಂಬ ಬೇಡಿಕೆ ಹುಟ್ಟಿಕೊಂಡಿದೆ. ಪಂಜಾಬ್ನ ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಅವರು ‘ಎಮರ್ಜೆನ್ಸಿ’ ಚಿತ್ರವನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.
”ಸಿಖ್ಖರ ಪಾತ್ರವನ್ನು ತಪ್ಪಾಗಿ ಚಿತ್ರಿಸುವ ಈ ಚಿತ್ರವನ್ನು ಭಾರತ ಸರ್ಕಾರ ತಕ್ಷಣವೇ ನಿಷೇಧಿಸಬೇಕು. ನಟಿ ಕಂಗನಾ ಉದ್ದೇಶಪೂರ್ವಕವಾಗಿಯೇ ಈ ಸಿನಿಮಾ ಮಾಡಿದ್ದು, ಇದನ್ನು ಸಿಖ್ ಸಮುದಾಯ ಸಹಿಸುವುದಿಲ್ಲ” ಎಂದು ಹರ್ಜಿಂದರ್ ಸಿಂಗ್ ತಮ್ಮ ತಮ್ಮ ಎಕ್ಸ್ ಖಾತೆಯ ಪೋಸ್ಟ್ ಮೂಲಕ ಆಗ್ರಹಿಸಿದ್ದಾರೆ.
Be the first to comment