ಇಂಗ್ಲೀಷ್ ಗೆ ಡಬ್ ಆದ ‘ಕಾಂತಾರ ಚಾಪ್ಟರ್ 1’

ರಿಷಬ್ ಶೆಟ್ಟಿ ಅವರ ‘ಕಾಂತಾರ ಚಾಪ್ಟರ್ 1’ ಚಿತ್ರ   ಇಂಗ್ಲೀಷ್ ಭಾಷೆಯಲ್ಲೂ ತೆರೆಕಾಣಲು ಸಿದ್ಧವಾಗಿದೆ.

ಇಂಗ್ಲಿಷ್‌ಗೆ ಡಬ್ ಮಾಡಿ ವಿಶ್ವದಾದ್ಯಂತ ರಿಲೀಸ್ ಮಾಡುವುದಕ್ಕೆ ಹೊಂಬಾಳೆ ಫಿಲ್ಮ್ಸ್ ಸಿದ್ಧತೆಗಳನ್ನು ಮಾಡಿಕೊಂಡಿದೆ. ಶೀಘ್ರದಲ್ಲೇ ಕನ್ನಡ ಸಿನಿಮಾ ಗ್ಲೋಬಲ್ ಲೆವೆಲ್‌ನಲ್ಲಿ ಸದ್ದು ಮಾಡಲಿದೆ. ಇಂಗ್ಲೀಷ್ ಗೆ ಡಬ್ ಆದ ಭಾರತದ ಮೊದಲ ಚಿತ್ರ ‘ಕಾಂತಾರ ಚಾಪ್ಟರ್ 1’ ಗಿದೆ.

ಅಕ್ಟೋಬರ್ 31ಕ್ಕೆ ಕಾಂತಾರ ಚಾಪ್ಟರ್ 1 ಚಿತ್ರದ ಇಂಗ್ಲಿಷ್ ಅವತರಣಿಕೆಯ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.  ಇಂಗ್ಲಿಷ್ ಭಾಷೆಯಲ್ಲಿ ಸಿನಿಮಾ ರಿಲೀಸ್ ಮಾಡುವಾಗ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ.  ಇಂಗ್ಲೀಷ್ ಅವತರಣಿಕೆಯಲ್ಲಿ ಹಾಡುಗಳಿಗೆ ಕತ್ತರಿ ಹಾಕಿ ಸಿನಿಮಾವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.  ಹೀಗಾಗಿ ರನ್ ಟೈಮ್ 2.14 ಗಂಟೆ ಇದೆಯೆಂದು ಹೇಳಲಾಗಿದೆ.

ಸಿನಿಮಾ ಬಿಡುಗಡೆಯಾಗಿ 21ನೇ ದಿನಕ್ಕೆ ಕಾಲಿಟ್ಟಿರುವ ಕಾಂತಾರ ಚಾಪ್ಟರ್ 1 ಚಿತ್ರ  ಹೊಸ ಹೊಸ ದಾಖಲೆಗಳನ್ನು ಸೃಷ್ಟಿ ಮಾಡುತ್ತಲೇ ಇದೆ. ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್ ಇಂಗ್ಲೀಷ್   ಡಬ್ ಸಾಹಸಕ್ಕೆ ಕೈ ಹಾಕಿದೆ.

ಕಾಂತಾರ ಚಾಪ್ಟರ್ 1 ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ದೇಶ-ವಿದೇಶಗಳಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!