‘ಬಿಗ್ ಬಾಸ್ ಸ್ಪರ್ಧಿ11ರ ಸ್ಪರ್ಧಿ ಚೈತ್ರಾ ಕುಂದಾಪುರ ಕಳ್ಳಿ, ಅವಳ ಗಂಡ ಕಳ್ಳ’ ಎಂದು ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಆರೋಪ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಇತ್ತೀಚೆಗೆಷ್ಟೇ ತಮ್ಮ ಹುಟ್ಟೂರಿನಲ್ಲಿ ಶ್ರೀಕಾಂತ್ ಕಶ್ಯಪ್ ಜೊತೆ ಮದುವೆಯಾಗಿದ್ದರು. ಇದೀಗ ಚೈತ್ರಾ ಬಗ್ಗೆ ತಂದೆ ಬಾಲಕೃಷ್ಣ ನಾಯ್ಕ್ ಮಾಧ್ಯಮಗಳ ಮುಂದೆ ಮಗಳ ಬಗ್ಗೆ ಸಾಕಷ್ಟು ಆರೋಪ ಮಾಡಿದ್ದಾರೆ.
‘ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ’ ಎಂದು ಬಾಲಕೃಷ್ಣ ನಾಯ್ಕ್ ಹೇಳಿದ್ದಾರೆ.
‘ಚೈತ್ರಾ ಬಿಗ್ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೇಗ ಹಾಕಿ ಬಿಗ್ಬಾಸ್ಗೆ ಹೋಗಿದ್ದಳು. ಈಗ ನಾನು ಕಟ್ಟಿದ ಮನೆಯಲ್ಲಿ ನಾನೇ ಅನಾಥವಾಗಿದ್ದೇನೆ. ಚೈತ್ರಾ ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ಆಕೆ ನನ್ನ ಜೀವನದಲ್ಲಿ ಬರಲೇಬಾರದು. ಜನ ಆಕೆಗೆ ಮನ್ನಣೆ ಕೊಡಬಾರದು. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು’ ಎಂದು ಹೇಳಿದ್ದಾರೆ.
—–





Be the first to comment