ಸಾರಾ ಅಲಿ ಖಾನ್ ವಿರುದ್ಧ ಫತ್ವಾ

ಬಾಲಿವುಡ್ ನಟಿ ಸಾರಾ ಅಲಿ ಖಾನ್, ಕೇದಾರನಾಥ ದೇವಾಲಯ ಮತ್ತು ಮಹಾಕಾಳೇಶ್ವರ ದೇವಾಲಯ ಸೇರಿದಂತೆ ವಿವಿಧ ಹಿಂದೂ ದೇವಾಲಯಗಳಿಗೆ ಭೇಟಿ ನೀಡುತ್ತಿರುವುದನ್ನು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಫತ್ವಾ ಹೊರಡಿಸಿದ್ದಾರೆ.

‘ಸಾರಾ ಅಲಿ ಖಾನ್ ಅವರು ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಈ ಕುರಿತು ಅನೇಕ ಮುಸ್ಲಿಂ ಯುವಕರು ಕೂಡ ನನ್ನನ್ನು ಪ್ರಶ್ನಿಸಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಯಾವುದೇ ವ್ಯಕ್ತಿ, ಪುರುಷರಾಗಿರಲಿ ಅಥವಾ ಮಹಿಳೆಯಾಗಿರಲಿ, ಬೇರೆ ಧರ್ಮದ ಧಾರ್ಮಿಕ ನಂಬಿಕೆಗಳಲ್ಲಿ ಪಾಲ್ಗೊಳ್ಳುವುದು, ಪೂಜೆ ಸಲ್ಲಿಸುವುದು ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ಆಚರಿಸುವುದು ಷರಿಯಾ ಪ್ರಕಾರ ಅನುಮತಿಸಲಾಗದ  ಕೃತ್ಯವೆಂದು ಪರಿಗಣಿಸಲಾಗುತ್ತದೆ. ಇಂತಹ ಆಚರಣೆಗಳಿಗೆ ಅನುಮತಿ ಇಲ್ಲ’ ಎಂದು ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಹೇಳಿದ್ದಾರೆ.

ಕೇದಾರನಾಥ ದೇವಾಲಯ ಮತ್ತು ಮಹಾಕಾಳೇಶ್ವರ ದೇವಾಲಯ ಸೇರಿದಂತೆ ವಿವಿಧ ಹಿಂದೂ ದೇವಾಲಯಗಳಿಗೆ ಸಾರಾ ಅಲಿ ಖಾನ್ ಭೇಟಿ ನೀಡುತ್ತಿರುವುದನ್ನು ಪ್ರಶ್ನಿಸಿ ಅವರು ಧಾರ್ಮಿಕ ನಂಬಿಕೆಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಇಂತಹ ಆಚರಣೆಗಳಿಗೆ ಇಸ್ಲಾಂ ಧರ್ಮದಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದಾರೆ.

ಮುಸ್ಲಿಂ ಧರ್ಮಕ್ಕೆ ಸೇರಿದ ತಂದೆ ಸೈಫ್ ಅಲಿ ಖಾನ್, ಹಿಂದೂ ಧರ್ಮಕ್ಕೆ ಸೇರಿದ ತಾಯಿ ಅಮೃತಾ ಸಿಂಗ್ ಅವರ ಪುತ್ರಿಯಾಗಿರುವ ಸಾರಾ ಅಲಿ ಖಾನ್, ಹಿಂದೂ ದೇವಾಲಯಗಳಿಗೆ ಭೇಟಿ ನೀಡುತ್ತಿರುವುದಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!