ಫೆ.17ರಂದು ಅಮೆಜಾನ್ ಪ್ರೈಮ್ ನಲ್ಲಿ ‘ಫ್ಯಾಮಿಲಿ ಪ್ಯಾಕ್’ ರಿಲೀಸ್

ಪಿ ಆರ್ ಕೆ ಪ್ರೊಡಕ್ಷನ್ಸ್ ನಿರ್ಮಾಣದ ‘ಫ್ಯಾಮಿಲಿ ಪ್ಯಾಕ್’ ಸಿನಿಮಾ ನೇರವಾಗಿ ಒಟಿಟಿ ಮೂಲಕ ಅಮೆಜಾನ್ ಪ್ರೈಮ್ ನಲ್ಲಿ ಫೆ.17ರಂದು ಬಿಡುಗಡೆಯಾಗಲಿದೆ.

ಅರ್ಜುನ್ ಕುಮಾರ್ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಲಿಖಿತ್ ಶೆಟ್ಟಿ ಮತ್ತು ಅಮೃತಾ ಅಯ್ಯಂಗಾರ್ ಅವರು ಮುಖ್ಯಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ರಂಗಾಯಣ ರಘು, ತಿಲಕ್, ನಾಗಭೂಷಣ್, ಸಿಹಿಕಹಿ ಚಂದ್ರು, ಅಚ್ಚುತ್ ಕುಮಾರ್, ಸಾಧು ಕೋಕಿಲ ಮುಂತಾದವರು ಚಿತ್ರದ ತಾರಾಗಣದಲ್ಲಿದ್ದಾರೆ.
ಸಿನಿಮಾಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಉದಯ್ ಲೀಲಾ ಅವರು ಸಿನಿಮಾಟೊಗ್ರಫಿ ಮಾಡಿದ್ದಾರೆ.

ಮದುವೆ ಎನ್ನುವುದು ಇಬ್ಬರು ವ್ಯಕ್ತಿಗಳ ಮಧ್ಯೆ ಏರ್ಪಡುವ ಸಂಬಂಧವಲ್ಲ.ಎರಡು ಕುಟುಂಬಗಳ ನಡುವೆ ಏರ್ಪಡುವಂಥದ್ದು ಎನ್ನುವ ಸಂದೇಶ ಸಿನಿಮಾದಲ್ಲಿ ನೀಡುವ ಯತ್ನ ಮಾಡಲಾಗಿದೆ.

ಚಿತ್ರವನ್ನು ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಣ ಮಾಡಿದ್ದಾರೆ. ನಿರ್ದೇಶನ ಅರ್ಜುನ್ ಕುಮಾರ್ ಅವರದ್ದು. ಈಗಾಗಲೇ ಚಿತ್ರದ ಟ್ರೈಲರ್ ಬಿಡುಗಡೆ ಆಗಿದ್ದು, ಸಿನಿ ಪ್ರಿಯರನ್ನು ತನ್ನ ಕಡೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!