ಇತ್ತೀಚೆಗೆ ಬಿಡುಗಡೆಯಾದ ಫೈಟರ್ ಚಿತ್ರದ ಯಶಸ್ಸಿಗೆ ನಾಯಕನಟ ವಿನೋದ್ ಪ್ರಭಾಕರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರೇಕ್ಷಕರಿಂದ ಇಷ್ಟೊಂದು ಉತ್ತಮ ಪ್ರತಿಕ್ರಿಯೆಯನ್ನು ನಿರೀಕ್ಷಿಸಿರಲಿಲ್ಲ ಎಂದು ವಿನೋದ್ ಪ್ರಭಾಕರ್ ಹೇಳಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಫೈಟರ್ ಚಿತ್ರ 2018ರಲ್ಲಿ ಆರಂಭವಾಗಿತ್ತು. ಈಗ ಬಿಡುಗಡೆ ಆಗಿದೆ. ಚಿತ್ರ ಬಿಡುಗಡೆ ಆದಾಗ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವ ಭಯ ಇತ್ತು. ಆದರೆ ಚಿತ್ರವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಚಿತ್ರದಲ್ಲಿ ರೈತರ ಸಮಸ್ಯೆ ಬಗ್ಗೆ ಹೇಳಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗ ನಾವು ಪ್ರೇಕ್ಷಕರನ್ನು ಭೇಟಿಯಾಗಲು ಚಿತ್ರಮಂದಿರಗಳಿಗೆ ಭೇಟಿ ನೀಡಲಿದ್ದೇವೆ. ಫ್ಯಾಮಿಲಿ ಆಡಿಯನ್ಸ್ ಸಿನಿಮಾವನ್ನು ನೋಡಿ ಖುಷಿಪಡುತ್ತಿದ್ದಾರೆ ಎಂದು ವಿನೋದ್ ಪ್ರಭಾಕರ್ ಹೇಳಿದ್ದಾರೆ.
ಚಿತ್ರದ ನಾಯಕಿ ಲೇಖಾಚಂದ್ರ ಅವರು ಸಿನಿಮಾ ನೋಡಿದವರು ನನ್ನ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಚಿತ್ರದ ನಿರ್ದೇಶಕ ನೂತನ್ ಉಮೇಶ್ ಹಾಗೂ ನಿರ್ಮಾಪಕ ಸೋಮಶೇಖರ್ ಅವರು ಪ್ರೇಕ್ಷಕರ ಸ್ಪಂದನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
___





Be the first to comment