ರಕ್ಷಿತ್ ಶೆಟ್ಟಿ ತಮ್ಮ ಪರವಃ ಸ್ಟುಡಿಯೋ ಅಡಿಯಲ್ಲಿ ಎರಡು ಚಿತ್ರಗಳ ಘೋಷಣೆ ಮಾಡಿದ್ದಾರೆ.
ಪರವಃ ಸ್ಟುಡಿಯೋ ವತಿಯಿಂದ ಇಬ್ಬನಿ ತಬ್ಬಿದ ಇಳೆಯಲಿ ಹಾಗೂ ಬ್ಯಾಚುಲರ್ ಪಾರ್ಟಿ ಸಿನಿಮಾ ಅನೌನ್ಸ್ ಮಾಡಲಾಗಿದೆ. ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಕಿರುತೆರೆ ನಟಿ ಅಂಕಿತಾ ಅಮರ್ ಹಾಗೂ ವಿಹಾನ್ ನಟನೆ ಮಾಡಲಿದ್ದಾರೆ.
ಇನ್ನೊಂದು ಚಿತ್ರವಾದ ದಿಗಂತ್, ರಿಷಬ್ ಹಾಗೂ ಅಚ್ಯುತ್ ಅಭಿನಯದ ಬ್ಯಾಚುಲರ್ ಪಾರ್ಟಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹಾಕುತ್ತಿದ್ದಾರೆ. ಸಿನಿಮಾವನ್ನ ಅಭಿಜಿತ್ ಮಹೇಶ್ ನಿರ್ದೇಶನ ಮಾಡುತ್ತಿದ್ದಾರೆ.
ರಕ್ಷಿತ್ ಶೆಟ್ಟಿ ನಿರ್ಮಾಣದ ಪರಂವಾ ಸ್ಟುಡಿಯೋಸ್ ನಿರ್ಮಾಣದಲ್ಲಿ ದಿಗಂತ್ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಓಡಾಡುತ್ತಿತ್ತು.
ಈಗ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
___

Be the first to comment