ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ದರ್ಶನ್ ವಿರುದ್ಧ ಕ್ರಮ

”ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ವಿರುದ್ಧ ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ಎಂ ಸುರೇಶ್‌ ಹೇಳಿದ್ದಾರೆ.

ದರ್ಶನ್ ವಿರುದ್ಧ ಕೆಎಫ್‌ಸಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಅವರ ಸಿನಿಮಾ ಬಿಡುಗಡೆ ಮಾಡಬಾರದು, ಅವರನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿ ತಮ್ಮನ್ನು ಭೇಟಿ ಮಾಡಿದ ಕೆಲವು ಕನ್ನಡ ಪರ ಸಂಘಟನೆಗಳ ಸದಸ್ಯರಿಗೆ ಪ್ರತಿಕ್ರಿಯಿಸಿದ ಎನ್.ಎಂ. ಸುರೇಶ್, ”ಮೊದಲಿಗೆ ರೇಣುಕಾ ಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ.ಫಿಲಂ ಚೇಂಬರ್ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಬೇಡಿ. ಅದನ್ನು ನಾನು ಒಪ್ಪಲ್ಲ” ಎಂದರು.

”ಕಾನೂನು ಪ್ರಕಾರ ಪ್ರಕರಣದ ಸಮಗ್ರ ತನಿಖೆ ನಡೆಸುತ್ತಿದ್ದು, ಸತ್ಯವನ್ನು ಹೊರಗೆ ತರಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ. ಕಲಾವಿದರ ಸಂಘದ ಜೊತೆಗೆ ಮಾತನಾಡಲು ಪ್ರಯತ್ನಿಸಿದ್ದೇವೆ. ಅವರ ಜೊತೆಗೆ ಮಾತನಾಡದೆ ಏಕಪಕ್ಷೀಯವಾಗಿ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗದು. ಚರ್ಚೆ ನಡೆಸಲು ಸಭೆ ಕರೆಯಲಾಗುವುದು. ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ತಿಳಿಸಿದ್ದಾರೆ.

”ಇಂತಹ ಘಟನೆಗಳಿಂದ ಚಿತ್ರರಂಗಕ್ಕೆ ಅಪಖ್ಯಾತಿ ಉಂಟಾಗುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಯಾರೂ ಕಾನೂನಿಗಿಂತ ಮೇಲಲ್ಲ” ಎಂದು ಚಿತ್ರ ನಿರ್ಮಾಪಕ ಹಾಗೂ ಕೆಎಫ್‌ಸಿಸಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ಹೇಳಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!