ಫಿಲಂ ಚೇಂಬರ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಚುರುಕು

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೇ 28ರಂದು ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಆಗಿದೆ.

ನಿರ್ಮಾಪಕ, ಹೋರಾಟಗಾರ ಸಾ.ರಾ.ಗೋವಿಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಂತೆಯೇ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ.ಮ. ಹರೀಶ್​ ನಾಮಪತ್ರ ಸಲ್ಲಿಸಿದ್ದಾರೆ.

ಸಾ.ರಾ.ಗೋವಿಂದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದರೆ, ಅವರ ತಂಡದಲ್ಲಿರುವ ಚಿತ್ರಲೋಕ ವೀರೇಶ್ ನಿರ್ಮಾಪಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

ಕರಿಸುಬ್ಬು (ವಿ.ಸುಬ್ರಮಣಿ)ನಿರ್ಮಾಪಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ. ವಿತರಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಪಿ.ಎಸ್.ಜ್ಞಾನೇಶ್ವರ ಐತಾಳ್, ಪ್ರದರ್ಶಕರ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಪಿ.ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಕೆ.ಸಿ.ಎನ್. ಕುಮಾರ್ (ಎಂ.ಎನ್.ಕುಮಾರ್) ವಿತರಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ, ಪ್ರದರ್ಶಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಎಲ್.ಸಿ.ಕುಶಾಲ್ ಹಾಗೂ ಗೌರವ ಖಜಾಂಚಿ ಸ್ಥಾನಕ್ಕೆ ಬಿ.ಕೆ.ಜಯಸಿಂಹ ಮುಸರಿ ನಾಮಪತ್ರ ಸಲ್ಲಿಸಿದ್ದಾರೆ.

ಮೇ 28ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಎರಡು ವರ್ಷಕ್ಕೊಮ್ಮೆ ವಾಣಿಜ್ಯ ಮಂಡಳಿ ಚುನಾವಣೆ ನಡೆಯುತ್ತದೆ. ಆದರೆ ಕೊರೋನಾ ಕಾರಣದಿಂದ ಚುನಾವಣೆ ಮುಂದೂಡಲಾಗಿತ್ತು. ಹೀಗಾಗಿ ಅಧ್ಯಕ್ಷರ ಸ್ಥಾನದಲ್ಲಿ ಜೈರಾಜ್​ ಅವರೇ ಮುಂದುವರಿದಿದ್ದರು. ಈಗ ಮುಂದಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಮತ್ತೆ ಚುನಾವಣೆ ನಡೆಯಲಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!