filmcity: ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ರಾಜೇಂದ್ರ ಸಿಂಗ್‌ ಬಾಬು ಮನವಿ

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಹಿರಿಯ ನಿರ್ದೇಶಕ ಎಸ್‌.ವಿ. ರಾಜೇಂದ್ರ ಸಿಂಗ್‌ ಬಾಬು ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

‘ಚಿತ್ರನಗರಿ ನಿರ್ಮಾಣದಿಂದ ಈ ಪ್ರದೇಶದ ಜನರಿಗೆ ಉದ್ಯೋಗ ದೊರೆಯಲಿದೆ. ಸುಮಾರು 25 ಸಾವಿರ ಕುಟುಂಬಗಳಿಗೆ ಜೀವನೋಪಾಯಕ್ಕೆ ಅನುಕೂಲ ಆಗಲಿದೆ. ಚಿತ್ರನಗರಿ ಕಟ್ಟಲು ಏನೇ ಸಹಕಾರ ಬೇಕಾದರೂ ಕೊಡಲು ಸಿದ್ಧ ಇದ್ದೇನೆ. ಈ ಹಿನ್ನೆಲೆಯಲ್ಲಿ ಚಿತ್ರನಗರಿಯ ಕಾರ್ಯವನ್ನು ಶೀಘ್ರವೇ ಪ್ರಾರಂಭಿಸಬೇಕು’ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

‘ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಪತ್ರಕ್ಕೆ ಶಿವರಾಜ್‌ಕುಮಾರ್, ರಾಕ್‌ಲೈನ್ ವೆಂಕಟೇಶ್, ನಾಗತಿಹಳ್ಳಿ ಚಂದ್ರಶೇಖರ್, ಪಿ.ಶೇಷಾದ್ರಿ ಸೇರಿದಂತೆ ಇಪ್ತತ್ತಕ್ಕೂ ಅಧಿಕ ಗಣ್ಯರು ಸಹಿ ಮಾಡಿದ್ದಾರೆ. ಬಾಲಿವುಡ್‌ನ ಖ್ಯಾತ ನಟರಾದ ಧರ್ಮೇಂದ್ರ, ಹೇಮಾಮಾಲಿನಿ ಅವರೂ ಈ ಕುರಿತು ಸಹಿ‌ ಮಾಡಿ ಪತ್ರ ಕಳುಹಿಸಿದ್ದಾರೆ‌. ಧರ್ಮೇಂದ್ರ ಅವರಿಗೂ ಮೈಸೂರು ಅಚ್ಚುಮೆಚ್ಚು. ಅವರ ವೃತ್ತಿಜೀವನ ಆರಂಭವಾಗಿದ್ದೇ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ’ ಎಂದು ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!