ಡಿಸಿಎಂ ಡಿ.ಕೆ ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರ ತಂಗಿ ಎಂದು ನಂಬಿಸಿ ಚಿನ್ನದ ವ್ಯಾಪಾರಿಯೊಬ್ಬರಿಗೆ ವಂಚನೆ ಆರೋಪ ಕೇಳಿ ಬಂದಿದ್ದು, ನಟ ಧರ್ಮ ಸೇರಿ ಮೂವರ ವಿರುದ್ಧಎಫ್‌ಐಆರ್ ದಾಖಲಾಗಿದೆ.
ಐಶ್ವರ್ಯ ಗೌಡ @ ನವ್ಯಶ್ರೀ ಹಾಗೂ ಹರೀಶ್ ಕೆ ದಂಪತಿಯಿಂದ ವಂಚನೆ ಆರೋಪ ಕೇಳಿ ಬಂದಿದೆ. ನಟ ಧರ್ಮ ಮೂಲಕ ಕರೆ ಮಾಡಿಸಿ ಮಾಜಿ ಸಂಸದ ಡಿ ಕೆ ಸುರೇಶ್ ರಂತೆ ಮಾತಾಡಿಸಿರುವ ಆರೋಪ ಕೇಳಿ ಬಂದಿದೆ. ಚಿನ್ನದ ವ್ಯಾಪಾರಿ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದ ಅಂಗಡಿ ಮಾಲೀಕರಾದ ವನಿತಾ ಐತಾಳ್ ದೂರು ದಾಖಲಿಸಿದ್ದಾರೆ. ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ತಾನು ಮಾಜಿ ಸಂಸದರ ಸಹೋದರಿ, ಅನೇಕ ರಾಜಕೀಯ ನಾಯಕರ ಪರಿಚಯವಿದೆ ಎಂದು ವನಿತಾ ಅವರಿಗೆ ಐಶ್ವರ್ಯಾ ಗೌಡ, ಹಾಗೂ ಆಕೆಯ ಪತಿ ಹರೀಶ್ ನಂಬಿಸಿದ್ದಾರೆ. ಕಳೆದ 2023 ಅಕ್ಟೋಬರ್‌ನಿಂದ ಐಶ್ವರ್ಯ ಗೌಡ ಅವರು ಹಂತ ಹಂತವಾಗಿ ಚಿನ್ನವನ್ನು ಪಡೆದಿದ್ದಾರೆ. ಹಣ ಕೇಳಿದಾಗ ಡಿ.ಕೆ ಸುರೇಶ್ ಅವರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದ್ದಾರೆ. ಡಿ.ಕೆ ಸುರೇಶ್ ವಾಯ್ಸ್ನಲ್ಲಿ ನಟ ಧರ್ಮೇಂದ್ರ ಅವರು ಕರೆ ಮಾಡಿ ಮಾತನಾಡಿದ್ದಾರೆ ಎಂದು ವನಿತಾ ಐತಾಳ್ ದೂರಿನಲ್ಲಿ ತಿಳಿಸಿದ್ದಾರೆ.
9 ಕೋಟಿ ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಪ್ರಕರಣದಲ್ಲಿ ಮೂವರ ಮೇಲೆ ಎಫ್‌ಐಆರ್ ದಾಖಲಾಗಿದೆ.
Be the first to comment