ಸಾ.ರಾ ಗೋವಿಂದು ವಿರುದ್ಧ ಎಫ್‌ಐಆರ್

ನಟ ಚೇತನ್ ಅಹಿಂಸಾಗೆ ಬೆದರಿಕೆ ಹಾಗೂ ಮನೆ ಮುಂದೆ ಗಲಾಟೆ ನಡೆಸಿದ ಆರೋಪದ ಮೇಲೆ ಸಿನಿಮಾ ನಿರ್ಮಾಪಕ ಸಾ.ರಾ ಗೋವಿಂದು ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಬಗ್ಗೆ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಡಾ. ರಾಜ್‌ಕುಮಾರ್ ಅವರ ಸಮಾಧಿ ಸ್ಥಳದ ಬಗ್ಗೆ ಚೇತನ್ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ವಿವಾದ ತೀವ್ರ ಸ್ವರೂಪ ಪಡೆಯಿತು. ಸಾಮಾಜಿಕ ಜಾಲತಾಣದ ಪೋಸ್ಟ್ ವಿಚಾರವಾಗಿ ಆಕ್ರೋಶಗೊಂಡ ಕೆಲವರು ಚೇತನ್ ನಿವಾಸದ ಬಳಿ ತೆರಳಿ ಗಲಾಟೆ ನಡೆಸಿದ್ದರು.

ಚೇತನ್ ಅಹಿಂಸಾ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಾ.ರಾ ಗೋವಿಂದು, ಶಿವರಾಮೇಗೌಡ, ಶಿವಕುಮಾರ್ ನಾಯ್ಕ್ ಸೇರಿದಂತೆ ಹಲವರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

ದೂರು ನೀಡಿದ ನಂತರ ಪ್ರತಿಕ್ರಿಯಿಸಿದ ಚೇತನ್, “ಕಳೆದ ಶನಿವಾರ ಸಾ.ರಾ ಗೋವಿಂದು ಮತ್ತು ಕೆಲವರು ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದರು . ಈ ಬಗ್ಗೆ ಕ್ರಮ ವಹಿಸಲು ದೂರು ನೀಡಲಾಗಿದೆ” ಎಂದು ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡುತ್ತಾ ಬಂದಿರುವ ಚೇತನ್ ಈಗ ಮತ್ತೆ ಸುದ್ದಿಯಾಗಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!