ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ 5 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ವಿಜಯಲಕ್ಷ್ಮಿ ಬಗ್ಗೆ ಯೂಟ್ಯೂಬ್ ಚಾನೆಲ್‌ವೊಂದು ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದ ವಿಡಿಯೋಗೆ ಕೆಲವರು ವಿಜಯಲಕ್ಷ್ಮಿ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದರು. ಈ ಸಂಬಂಧ ವ್ಯಕ್ತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಮಹಿಳಾ ಆಯೋಗ ಪೊಲೀಸ್ ಕಮೀಷನರ್‌ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು.
ದೂರು ಪರಿಶೀಲನೆ ನಡೆಸಿದ ಸಿಕೆ ಅಚ್ಚುಕಟ್ಟು ಪೊಲೀಸರು BNS ಸೆಕ್ಷನ್ 75, 79 ಹಾಗೂ ಐಟಿ ಆ್ಯಕ್ಟ್ 67, 66 ಅಡಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. 5ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಬಗ್ಗೆ ಅಸಭ್ಯ, ಅಶ್ಲೀಲ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮಹಿಳಾ ಆಯೋಗ ಪತ್ರ ಬರೆದಿದೆ.
ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದ್ದು ಸ್ಟಾರ್ ನಟರನ್ನು ಮಾತ್ರವಲ್ಲದೇ ಅವರ ಕುಟುಂಬದವರ ಬಗ್ಗೆಯೂ ಅಸಭ್ಯವಾಗಿ ಪೋಸ್ಟ್ ಮಾಡಲಾಗುತ್ತಿದೆ. ಇಂಥ ಕಿಡಿಗೇಡಿಗಳ ವಿರುದ್ಧ ಈಗಾಗಲೇ ರಮ್ಯಾ ಕಾನೂನಿನ ಕ್ರಮ ಕೈಗೊಂಡಿದ್ದಾರೆ.
—-





Be the first to comment