ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಮೂಲಕ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಫೈರ್ ಫ್ಲೈ ಈಗಾಗಲೇ ನಾನಾ ವಿಷಯಗಳಿಂದ ಸುದ್ದಿಯಲ್ಲಿದೆ. ಪೋಸ್ಟರ್, ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಇನ್ ದಿ ನೈಟ್ ಎಂಬ ಮೆಲೋಡಿ ಗೀತೆಯನ್ನು ಅನಾವರಣ ಮಾಡಲಾಗಿದೆ. ಧನಂಜಯ್ ರಂಜನ್ ಸಾಹಿತ್ಯ ಬರೆದಿರುವ ಗೀತೆಗ ಸಾಹಿತ್ಯ ಬರೆದಿದ್ದು, ಕಪಿಲ್ ಕಪಿಲನ್ ಧ್ವನಿಯಾಗಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಇನ್ ದಿ ನೈಟ್ ಎನ್ನುತ್ತಾ ವಂಶಿ ಹಾಗೂ ರಚನಾ ಹೆಜ್ಜೆ ಹಾಕಿದ್ದಾರೆ.
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಹೀರೋ ಜೊತೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಉಳಿದಂತೆ, ಅಚ್ಯುತ್ ಕುಮಾರ್, ಸುಧಾರಾಣಿ, ರಚನಾ ಇಂದರ್, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಳಾ ಬಿರಾದರ್, ಮೂಗು ಸುರೇಶ್ ಮುಂತಾದವರು ನಟಿಸಿದ್ದಾರೆ.
ಈ ಚಿತ್ರದ ಹಾಡುಗಳಿಗೆ ಚರಣ್ ರಾಜ್ ಅವರು ಸಂಗೀತ ನೀಡಿದ್ದಾರೆ. ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಕ್ಕಿದೆ. ಅಭಿಲಾಷ್ ಕಳತ್ತಿ ಕ್ಯಾಮೆರಾ ಚಿತ್ರಕ್ಕಿದೆ. ವರನಟ ಡಾ. ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದೇ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ ತೆರೆಕಾಣುತ್ತಿದೆ.

Be the first to comment