ಶೀಘ್ರವೇ ಗಾಳಿಪಟ2 ಚಿತ್ರದ ಶೂಟಿಂಗ್

ಬಹುನಿರೀಕ್ಷಿತ ಗಾಳಿಪಟ 2 ಸಿನಿಮಾದ ಚಿತ್ರೀಕರಣ ಸೆಪ್ಟೆಂಬರ್ 18ರಿಂದ ಮತ್ತೆ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಸಿನಿಮಾದ ಶೂಟಿಂಗ್ ಸ್ಥಗಿತ ಆಗಿತ್ತು. ಈಗ ಮತ್ತೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ.

2008ರಲ್ಲಿ ಬಿಡುಗಡೆಯಾಗಿದ್ದ ಗಾಳಿಪಟ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಗಣೇಶ್, ದಿಗಂತ್, ರಾಜೇಶ್ ಕೃಷ್ಣನ್ ತಮ್ಮ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಗಾಳಿಪಟ-2 ಚಿತ್ರದಲ್ಲಿ ರಾಜೇಶ್ ಕೃಷ್ಣನ್ ಬದಲಿಗೆ ಲೂಸಿಯ ಚಿತ್ರದ ನಿರ್ದೇಶಕ ಪವನ್ ಕುಮಾರ್ ನಟಿಸುತ್ತಿದ್ದಾರೆ. ಪವನ್ ಕುಮಾರ್ ಈ ಹಿಂದೆ ಯೋಗರಾಜ್ ಭಟ್ಟರ ಮನಸಾರೆ ಮತ್ತು ಪಂಚರಂಗಿ ಸಿನಿಮಾಗಳಲ್ಲಿ ನಟಿಸಿದ್ದರು.

ಅನಂತ್ ನಾಗ್ ಈ ಸಿನಿಮಾದಲ್ಲಿ ಮೇಷ್ಟ್ರ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದನ್ನು ಯೋಗರಾಜ ಭಟ್ ಈಗಾಗಲೇ ಹೇಳಿದ್ದಾರೆ.

ಗಾಳಿಪಟ-2 ಚಿತ್ರದ ಶೇ.70 ರಷ್ಟು ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ. ಕಝಕಿಸ್ತಾನದಲ್ಲಿ ಶೂಟಿಂಗ್ ಮಾಡಲ್ಪಟ್ಟ ಮೊದಲ ಕನ್ನಡ ಸಿನಿಮಾ ಎನ್ನುವ ಖ್ಯಾತಿಗೆ ಈ ಚಿತ್ರ ಪಾತ್ರವಾಗಿದೆ.
___________

Be the first to comment

Leave a Reply

Your email address will not be published. Required fields are marked *

Translate »
error: Content is protected !!