‘ಗಜರಾಮ’ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ

‘ಗಜರಾಮ’ ಸ್ಪೆಷಲ್ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದ್ದು ಝಗಮಗಿಸುವ ಸೆಟ್ ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ತುಪ್ಪದ ಬೆಡಗಿ ರಾಗಿಣಿ‌,  ರಾಜವರ್ಧನ್ ಜೊತೆ ಹೆಜ್ಜೆ ಹಾಕಿದ್ದಾರೆ.

ರಾಗಿಣಿ ಮಾತನಾಡಿ, ಹೊಸ ಹೊಸ ಪ್ರಯತ್ನಗಳು ನಮ್ಮ ಇಂಡಸ್ಟ್ರೀಯಲ್ಲಿ ಆಗಬೇಕು. ಕನ್ನಡ ಸಿನಿಮಾಗಳು ಒಳ್ಳೆ ರೀತಿಯಲ್ಲಿ ಬೆಳೆಯುತ್ತಿವೆ. ಅದನ್ನು ನೋಡಿ ಹೆಮ್ಮೆ ಅನಿಸುತ್ತದೆ.  ಗಜರಾಮ ಸಿನಿಮಾದಲ್ಲಿ ನನಗಾಗಿ ಮಾಡಿರುವ ಸ್ಪೆಷಲ್ ಸಾಂಗ್ ಇದೆ. ಮನೋಮೂರ್ತಿ ಸರ್ ಮ್ಯೂಸಿಕ್, ಧನು ಕೊರಿಯೋಗ್ರಫಿ ಎಲ್ಲವೂ ಸೇರಿ ಈ ವರ್ಷದ ಹಿಟ್ ಹಾಡುಗಳಲ್ಲಿ ಒಂದಾಗಲಿದೆ. ಇಡೀ ತಂಡಕ್ಕೆ ನಿಮ್ಮ‌‌ ಬೆಂಬಲ ಇರಲಿ ಎಂದರು.

ರಾಜವರ್ಧನ್ ಮಾತನಾಡಿ, ಈ ಸಿನಿಮಾ ಒಂದು ವರ್ಷದ ಜರ್ನಿ. ಲೈಫ್ ಲೈನ್ ಪಿಕ್ಚರ್ಸ್ ಜೊತೆ ಮಾಡುತ್ತಿರುವ ಮೊದಲ ಚಿತ್ರ ಇದು. ಅದ್ಭುತವಾಗಿ ಸಿನಿಮಾ ಬಂದಿದೆ. ರಾಗಿಣಿ ಮೇಡಂ ಕಾಲೇಜ್ ಟೈಮ್ ನಿಂದ ಕ್ರಶ್. ಈಗ ವರ್ಕ್ ಮಾಡುವ ಅವಕಾಶ ಸಿಕ್ಕಿದ್ದು,  ಡ್ರೀಮ್ ಕಂಪ್ಲೀಟ್ ಆಗಿದೆ.  ರಾಮ್ ನನ್ನ ಪಾತ್ರ. ರಾಮ ರಾವಣ ಎರಡು ನಾನೇ. ತುಂಬಾ ಒಳ್ಳೆ ಆರ್ಟಿಸ್ಟ್ ಚಿತ್ರದಲ್ಲಿದ್ದಾರೆ ಎಂದರು.

ನಿರ್ದೇಶಕ ಸುನಿಲ್ ಕುಮಾರ್ ಮಾತನಾಡಿ, ಬೆಂಗಳೂರು, ಮೈಸೂರು, ಮಂಡ್ಯ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ರಾಜವರ್ಧನ್  ತುಂಬಾ ಡೆಡಿಕೇಷನ್ ಆಗಿ ಕೆಲಸ ಮಾಡಿದ್ದಾರೆ. ನಿರ್ಮಾಪಕರು ಬಜೆಟ್ ಕೇಳದೆ ಸಿನಿಮಾ ಮಾಡಿದ್ದಾರೆ. ಮನೋಮೂರ್ತಿ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ. ಸಾಂಗ್ ಕೇಳಿದ ತಕ್ಷಣ ರಾಗಿಣಿ ಮೇಡಂ ಒಪ್ಪಿಕೊಂಡರು ಎಂದರು.

ನಿರ್ಮಾಪಕ ನರಸಿಂಹಮೂರ್ತಿ ಮಾತನಾಡಿ, ಇವತ್ತು ಸಿನಿಮಾಗೆ ಕುಂಬಳಕಾಯಿ. ಮೂಹೂರ್ತ ಆದಾಗ ಎಷ್ಟು ಖುಷಿ ಆಗಿತ್ತು,  ಈಗ ಅಷ್ಟೇ ಖುಷಿಯಾಗುತ್ತಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಿನಿಮಾ ತೆರೆಗೆ ಬರುವ ಪ್ರಯತ್ನ ಮಾಡುತ್ತೇವೆ ಎಂದರು.

ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ಸಿನಿಮಾದಲ್ಲಿ ಒಟ್ಟು 5 ಹಾಡುಗಳಿವೆ. ಈ ಸಾಂಗ್ ಅದ್ಭುತವಾಗಿ ಮೂಡಿಬಂದಿದೆ. ಈ ತರ ಹಾಡು ಮಾಡದೆ ಬಹಳ ವರ್ಷಗಳೇ ಆಗಿದೆ ಎಂದರು.

ಶಿಷ್ಯ ದೀಪಕ್ ಪೊಲೀಸ್ ಪಾತ್ರದಲ್ಲಿ, ತೆಲುಗಿನ ಖ್ಯಾತ ಖಳನಟ ಕಬೀರ್ ಸಿಂಗ್ ಖಳನಾಯಕನಾಗಿ, ತಪಸ್ವಿನಿ ರಾಜವರ್ಧನ್ ಗೆ ಜೋಡಿಯಾಗಿ ನಟಿಸಿದ್ದಾರೆ. ಕಾಮಿಡಿ‌ಕಿಲಾಡಿ ಖ್ಯಾತಿಯ ಸಂತು ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ಖ್ಯಾತ ನಿರ್ದೇಶಕರಾದ ಯೋಗರಾಜ್ ಭಟ್, ‘ದುನಿಯಾ’ ಸೂರಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನಿಲ್ ಕುಮಾರ್‌ ಈಗ ‘ಗಜರಾಮ’ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಆಕ್ಷನ್ ಮಾಸ್ ಎಂಟರ್‌ಟೇನರ್ ಆಗಿರುವ ‘ಗಜರಾಮ’ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ,  ಜ್ಞಾನೇಶ್ ಬಿ. ಮಠದ್ ಸಂಕಲನದ ಹೊಣೆ ಹೊತ್ತುಕೊಂಡಿದ್ದಾರೆ. ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಪ್ರಮೋದ್ ಮರವಂತೆ ಅವರ ಸಾಹಿತ್ಯ  ಚಿತ್ರಕ್ಕಿದೆ.

‘ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!