ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ2 ಚಿತ್ರದ ಟಿಕೆಟ್ ಬುಕ್ಕಿಂಗ್ ಆರಂಭ ಆಗಿದೆ.
ಚಿತ್ರ ಆಗಸ್ಟ್ 12ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ‘ಗೋಲ್ಡನ್ ಸ್ಟಾರ್’ ಗಣೇಶ್, ಪವನ್ ಕುಮಾರ್, ದಿಗಂತ್ ನಟಿಸಿದ್ದಾರೆ. ಬುಕ್ ಮೈ ಶೋನಲ್ಲಿ ಅಕ್ಷಯ್ ಕುಮಾರ್ ಅಭಿನಯದ ‘ರಕ್ಷಾ ಬಂಧನ್’ ಚಿತ್ರಕ್ಕಿಂತಲೂ ಹೆಚ್ಚಿನ ವೋಟ್ಸ್ ಪಡೆಯುವ ಮೂಲಕ ‘ಗಾಳಿಪಟ 2’ ಸಿನಿಮಾ ಮೇಲುಗೈ ಸಾಧಿಸಿದೆ.
ಈಗಾಗಲೇ ಗಾಳಿಪಟ-2 ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಗಾಳಿಪಟ2 ಸಿನಿಮಾದಲ್ಲಿ ಸ್ನೇಹ, ಸಂಕಟದ ಕಥಾಹಂದರ ಮೂಡಿ ಬಂದಿದೆ.
ಗಾಳಿಪಟ ಸಕ್ಸಸ್ ಆದ ಖುಷಿಯಲ್ಲಿ ಭಟ್ ಎರಡನೇ ಭಾಗ ತಯಾರಿಸಿದ್ದಾರೆ. ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಪವನ್ ಕುಮಾರ್ ಮತ್ತು ದಿಗಂತ್ ವಿದ್ಯಾರ್ಥಿಗಳಾಗಿ ನಟನೆ ಮಾಡಿದ್ದಾರೆ. ಅನಂತ್ ನಾಗ್ ಅವರು ಎಂಎ ಕನ್ನಡ ಮೇಷ್ಟ್ರು ಆಗಿ ಕಾಣಿಸಿಕೊಂಡಿದ್ದಾರೆ.
ಅನಂತನಾಗ್ ಮತ್ತು ಮೂರು ಜನ ನಾಯಕರ ನಡುವಿನ ದೃಶ್ಯಗಳು ಸಿನಿಮಾದಲ್ಲಿ ಬಹಳ ಮುಖ್ಯ ಎಂದು ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದಾರೆ.
‘ಗಾಳಿಪಟ 2’ ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಸಿನಿಮಾಟೋಗ್ರಫಿ ಮಾಡಿದ್ದಾರೆ. ರಮೇಶ್ ರೆಡ್ಡಿ ಚಿತ್ರ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸಂಯುಕ್ತಾ ಮೆನನ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸಿದ್ದಾರೆ.
___

Be the first to comment