ಪುನೀತ್ ರಾಜ್ಕುಮಾರ್ ನಟನೆಯ ‘ಗಂಧದಗುಡಿ’ ಸಾಕ್ಷ್ಯಚಿತ್ರ, ಪುನೀತ್ ರಾಜ್ಕುಮಾರ್ ಅವರ ಬರ್ತ್ಡೇ ಪ್ರಯುಕ್ತ ಮಾರ್ಚ್ 17ರಂದು ಅಮೇಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಲಿದೆ.
‘ಗಂಧದಗುಡಿ’ ಸಾಕ್ಷ್ಯಚಿತ್ರದಲ್ಲಿ ಕಾಡಿನ ಕಥೆ ಇದೆ. ನಾಗರಹೊಳೆಯಿಂದ ಆರಂಭವಾಗುವ ಪುನೀತ್ ಹಾಗೂ ನಿರ್ದೇಶಕ ಅಮೋಘವರ್ಷ ಪಯಣ ರಾಜ್ಕುಮಾರ್ ಹುಟ್ಟೂರಾದ ಗಾಜನೂರು, ಬಿಆರ್ಟಿ ಟೈಗರ್ ರಿಸರ್ವ್, ಸಕ್ಕರೆ ಬೈಲು, ಕರಾವಳಿಯ ನೇತ್ರಾಣಿ, ಜೋಗ ಜಲಪಾತ, ಆಗುಂಬೆ, ಉತ್ತರ ಕರ್ನಾಟಕದ ವಿಜಯನಗರ, ತುಂಗಭದ್ರಾ, ಕಾಳಿ ನದಿಯಲ್ಲಿ ಪೂರ್ಣಗೊಳ್ಳುತ್ತದೆ.
ಕರ್ನಾಟಕದ ಅರಣ್ಯ ವೈವಿಧ್ಯತೆಯ ದರ್ಶನ ಈ ಸಾಕ್ಷ್ಯಚಿತ್ರದಿಂದ ಆಗಿದೆ. ಕಳೆದ ಅಕ್ಟೋಬರ್ 28ರಂದು ಈ ಸಾಕ್ಷ್ಯಚಿತ್ರ ಥಿಯೇಟರ್ನಲ್ಲಿ ರಿಲೀಸ್ ಆಗಿತ್ತು. ಈಗ ಇದು ಒಟಿಟಿಗೆ ಕಾಲಿಡುತ್ತಿದೆ.
ಇಂದು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಜನ್ಮದಿನ ಆಗಿದ್ದು ಇಂದು ‘ಗಂಧದಗುಡಿ’ಯ ಒಟಿಟಿ ರಿಲೀಸ್ ದಿನಾಂಕ ತಿಳಿಸಲಾಗಿದೆ.
___

Be the first to comment