ಟೀಂ ಇಂಡಿಯಾದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದ ಸೌರವ್ ಗಂಗೂಲಿ ಬಯೋಪಿಕ್ ಚಿತ್ರೀಕರಣ 2026 ರ ಆರಂಭದಲ್ಲಿ ಪ್ರಾರಂಭವಾಗಲಿದೆ.
ಬಾಲಿವುಡ್ ನಟ ರಾಜ್‌ಕುಮಾರ್ ರಾವ್, ಗಂಗೂಲಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕಥೆ ಮತ್ತು ಕಥೆಯ ಕೆಲಸ ಮುಗಿದ ತಕ್ಷಣ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಗಂಗೂಲಿ ಹೇಳಿದ್ದಾರೆ.
ಚಿತ್ರೀಕರಣಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಆದರೆ ಪೋಸ್ಟ್ ಪ್ರೊಡಕ್ಷನ್ಸ್ಗೆ ಸಮಯ ತೆಗೆದುಕೊಳ್ಳಬಹುದು ಎಂದಿದ್ದಾರೆ ಗಂಗೂಲಿ. ಗಂಗೂಲಿ ಇಂಡಿಯಾ ಪರ 113 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 7,212 ರನ್ ಗಳಿಸಿದ್ದಾರೆ. ಇದರಲ್ಲಿ 16 ಶತಕಗಳು ಸೇರಿದ್ದು, ಅವರ ಗರಿಷ್ಠ ವೈಯಕ್ತಿಕ ಸ್ಕೋರ್ 23 ಆಗಿದೆ. ಏಕದಿನ ಕ್ರಿಕೆಟ್‌ನಲ್ಲಿ ಅವರು 311 ಪಂದ್ಯಗಳನ್ನಾಡಿದ್ದು, 11,363 ರನ್ ಗಳಿಸಿದ್ದಾರೆ. ಇದರಲ್ಲಿ 22 ಶತಕಗಳು ಸೇರಿವೆ.
ಸೌರವ್ ಗಂಗೂಲಿ ಅವರನ್ನು 2019 ರಲ್ಲಿ ಬಿಸಿಸಿಐ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಈ ಮೂಲಕ ಬಿಸಿಸಿಐ ಅಧ್ಯಕ್ಷರಾದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಗಂಗೂಲಿ ಪಾತ್ರರಾದರು. ವಿಜಯನಗರದ ಮಹಾರಾಜ್ ಕುಮಾರ್ ಈ ಹುದ್ದೆಯ ಜವಾಬ್ದಾರಿ ವಹಿಸಿಕೊಂಡ ಮೊದಲ ನಾಯಕರಾಗಿದ್ದರು.
ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ಅವರ ಭೂಲ್ ಚೂಕ್ ಮಾಫ್, ಸ್ತ್ರೀ, ಸ್ತ್ರೀ 2, ಶ್ರೀಕಾಂತ್, ಮಿಸ್ಟರ್ ಅಂಡ್ ಮಿಸ್ ಮಾಹಿ, ರೂಹಿ, ಛಲಾಂಗ್ ಸಿನಿಮಾಗಳು ಜನಪ್ರಿಯತೆ ಗಳಿಸಿವೆ.
—-





Be the first to comment