Garadi ತೆರೆಗೆ ಬರಲು ಗರಡಿ ಸಿದ್ಧ

ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ‘ ಗರಡಿ ‘ ಕಂಪ್ಲೀಟ್ ಆಗಿದ್ದು, ತೆರೆಗೆ ಶೀಘ್ರ ಬರಲಿದೆ. ಯಶಸ್ ಸೂರ್ಯ  ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾವನ್ನು ಯೋಗರಾಜ್‌ ಭಟ್ ಅಂದುಕೊಂಡ ಸಮಯದಲ್ಲೇ ಮುಗಿಸಿದ್ದಾರೆ.ರಾಮೋಹಳ್ಳಿಯ ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ‌ಗರಡಿಮನೆ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿತ್ತು. ಸಿನಿಮಾದ ಕೊನೆಯ ಭಾಗದ ಚಿತ್ರೀಕರಣವನ್ನು ಈ ಗರಡಿ ಮನೆ ಸೆಟ್‌ನಲ್ಲಿ ಶೂಟ್ ಮಾಡಲಾಗಿದೆ.

‘ಗರಡಿ’ ಸಿನಿಮಾವನ್ನು ಸುಮಾರು 70 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.  ಈ ಸಿನಿಮಾದಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಹೀರೊ ಯಶಸ್ ಸೂರ್ಯ ಅವರ ತಂದೆಯಾಗಿ ನಟಿಸಿದ್ದಾರೆ.ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶಸ್ ಸೂರ್ಯ ಈ ಚಿತ್ರದಲ್ಲಿ ಪೈಲ್ವಾನ್ ಆಗಿ ಕಾಣಿಸಿಕೊಂಡಿದ್ದಾರೆ.

ಯಶಸ್ ಸೂರ್ಯ ಜೊತೆ ಸೋನಾಲ್ ಮೊಂತೆರೊ, ರವಿಶಂಕರ್, ಬಿ.ಸಿ.ಪಾಟೀಲ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.ಈ ಸಿನಿಮಾವನ್ನು ಸಚಿವ ಬಿ.ಸಿ.ಪಾಟೀಲ್ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಾಣ ಮಾಡುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!