ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ “ಘೋಸ್ಟ್” ಚಿತ್ರದ ಮುಹೂರ್ತ ಮಿನರ್ವ ಮಿಲ್ ನಲ್ಲಿ ನೆರವೇರಿತು.
ಚಿತ್ರದ ಮೊದಲ ಸನ್ನಿವೇಶಕ್ಕೆ ಗೀತಾ ಶಿವರಾಜ್ ಕುಮಾರ್ ಆರಂಭ ಫಲಕ ತೋರಿದರು. ಬೃಂದಾ ಜಯರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಶ್ರೀನಿ ನಿರ್ದೇಶನ ಇದೆ. “ಶ್ರೀನಿವಾಸ ಕಲ್ಯಾಣ”, ” ಓಲ್ಡ್ ಮಾಂಕ್” ಸೇರಿದಂತೆ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿ ನಿರ್ದೇಶನದ ಐದನೇ ಚಿತ್ರ “ಘೋಸ್ಟ್” ಆಗಿದೆ. ಚಿತ್ರಕ್ಕೆ ಶ್ರೀನಿ ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆ ಬರೆದಿದ್ದಾರೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅದ್ದೂರಿ ಸೆಟ್ ಗಳನ್ನು ನಿರ್ಮಾಣ ಮಾಡಲಾಗಿದೆ. ಮಿನರ್ವ ಮಿಲ್ ನಲ್ಲಿ 15 ಭಿನ್ನ ಸೆಟ್ ಹಾಗೂ ಮೈಸೂರಿನಲ್ಲಿ 4 ಭಿನ್ನ ಸೆಟ್ ಗಳನ್ನು ಕಲಾ ನಿರ್ದೇಶಕ ಮೋಹನ್ ಬಿ ಕೆರೆ ನಿರ್ಮಾಣ ಮಾಡಿದ್ದಾರೆ.
ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಮಿನರ್ವ ಮಿಲ್ ನಲ್ಲಿ ನಿರ್ಮಿಸಲಾಗಿರುವ ಜೈಲ್ ಸೆಟ್ ನಲ್ಲೇ 24 ದಿನಗಳ ಚಿತ್ರೀಕರಣ ನಡೆಯಲಿದೆ. ಈ ಅದ್ದೂರಿ ಸೆಟ್ ಗಳ ನಿರ್ಮಾಣಕ್ಕೆ ಸುಮಾರು ಮೂರು ಕೋಟಿ ವೆಚ್ಚವಾಗಿದೆ ಎಂದು ಹೇಳಲಾಗಿದೆ.
___

Be the first to comment