ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್” ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.
ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ 15ಕ್ಕೂ ಅಧಿಕ ಸೆಟ್ ಗಳಲ್ಲಿ 28 ದಿನಗಳ ಚಿತ್ರೀಕರಣ ನಡೆದಿದೆ. ಶಿವರಾಜ್ ಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಮೋಹನ್ ಬಿ. ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.
ನಿರ್ದೇಶಕ ಶ್ರೀನಿ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ‘ಘೋಸ್ಟ್’ ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.
ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.
___

Be the first to comment