ತೆಲುಗು ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಜತೆಗೆ ‘ಗೋಲ್ಡನ್ ಸ್ಟಾರ್’ ಗಣೇಶ್ ಹೊಸ ಸಿನಿಮಾ ಮಾಡಲಿದ್ದಾರೆ.
ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗಲಿದೆ. ನೃತ್ಯ ನಿರ್ದೇಶಕ ಧನಂಜಯ್ ಅವರು ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.
‘ಪೀಪಲ್ ಮೀಡಿಯಾ ಫ್ಯಾಕ್ಟರಿ’ಯ #PMF49 ಚಿತ್ರದಲ್ಲಿ ಗಣೇಶ್ ಅಭಿನಯಿಸಲಿದ್ದಾರೆ. ‘ಕಾರ್ತಿಕೇಯ 2’, ‘ವೆಂಕಿ ಮಾಮ’, ‘ಓ ಬೇಬಿ’, ‘ಧಮಾಕಾ’ ಮುಂತಾದ ಸೂಪರ್ ಹಿಟ್ ಸಿನಿಮಾಗಳನ್ನು ಈ ಸಂಸ್ಥೆ ನೀಡಿದೆ.
ಇದು ಧನಂಜಯ್ ಅವರ ಚೊಚ್ಚಲ ನಿರ್ದೇಶನದ ಚಿತ್ರ. ಟಿಜಿ ವಿಶ್ವ ಪ್ರಸಾದ್ ನಿರ್ಮಾಣದ ಈ ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗಲಿದೆ. ಈ ಸಿನಿಮಾದ ಶೀರ್ಷಿಕೆ, ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಯಲಿದೆ.
‘ಗೋಲ್ಡನ್ ಸ್ಟಾರ್’ ಗಣೇಶ್ ಅವರು ನಟಿಸಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಚಿತ್ರದ ಯಶಸ್ಸಿನಲ್ಲಿ ಬಳಿಕ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಸಿನಿಮಾ 100 ದಿನ ಯಶಸ್ವಿ ಪ್ರದರ್ಶನ ಕಂಡಿದ್ದ ‘ಕೃಷ್ಣಂ ಪ್ರಣಯ ಸಖಿ’ , ಒಟಿಟಿಯಲ್ಲಿಯೂ ಜನರ ಮೆಚ್ಚುಗೆ ಪಡೆದಿದೆ.
Be the first to comment