ವಿಜಯ್ ರಾಘವೇಂದ್ರ ನಟಿಸಿರುವ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ತಮಿಳುನಾಡಿನಲ್ಲಿ ಸದ್ದು ಮಾಡಲು ಆರಂಭಿಸಿದೆ.
‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ವಾರದ ಹಿಂದಷ್ಟೆ ಬಿಡುಗಡೆ ಆಗಿದ್ದು ಸಿನಿಮಾ ಪ್ರೇಮಿಗಳು ಸಿನಿಮಾ ಮೆಚ್ಚಿಕೊಂಡಿದ್ದಾರೆ. ಆದರೆ ಕನ್ನಡದ ಕೆಲ ಒಳ್ಳೆಯ ಸಿನಿಮಾಗಳಿಗೆ ಆದ ಗತಿ ಈ ಸಿನಿಮಾಕ್ಕೂ ಆಗಿದೆ. ಸಿನಿಮಾವನ್ನು ಚಿತ್ರಮಂದಿರಗಳಿಂದ ಎತ್ತಂಗಡಿ ಮಾಡಲಾಗುತ್ತಿದೆ. ಆದರೆ ತಮಿಳುನಾಡಿನಲ್ಲಿ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಬೆಂಗಳೂರಿನಲ್ಲಿ ಕೆಲವೇ ಚಿತ್ರಮಂದಿರಗಳಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾದ ಕೆಲವೇ ಶೋ ಲಭ್ಯವಿದೆ. ಇತ್ತೀಚೆಗಷ್ಟೆ ಕೆಲವು ಶೋಗಳು ಹೆಚ್ಚುವರಿಯಾಗಿ ನೀಡಲಾಗಿದೆ. ತಮಿಳುನಾಡಿನಲ್ಲಿ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ದಿನದಿಂದ ದಿನಕ್ಕೆ ಶೋಗಳ ಸಂಖ್ಯೆ ಹೆಚ್ಚು ಮಾಡಿಕೊಳ್ಳುತ್ತಿದೆ.
ನಿರ್ದೇಶಕ, ನಿರ್ಮಾಪಕ ಪವನ್ ಒಡೆಯರ್ ಸಿನಿಮಾವನ್ನು ತಮಿಳುನಾಡಿನಲ್ಲಿ ವಿತರಣೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಸಿನಿಮಾ ಪಡೆದುಕೊಳ್ಳುತ್ತಿರುವ ಪ್ರತಿಕ್ರಿಯೆಯ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ 5 ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ‘ಸೀತಾರಾಮ್ ಬಿನೋಯ್’ ಸಿನಿಮಾದ ಎರಡನೇ ಭಾಗ ಆಗಿದೆ. ಸಿನಿಮಾ ಸಸ್ಪೆನ್ಸ್ ಥ್ರಿಲ್ಲರ್ ಕತೆ ಹೊಂದಿದೆ. ದೇವಿಪ್ರಸಾದ್ ಶೆಟ್ಟಿ ಸಿನಿಮಾ ನಿರ್ದೇಶನ ಮಾಡಿದ್ದಾರೆ.
—-





Be the first to comment