ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡಿಗೆ ಫ್ಯಾನ್ಸ್ ಭರ್ಜರಿ ರೆಸ್ಪಾನ್ಸ್ ನೀಡುತ್ತಿದ್ದಾರೆ.
ಹೋಳಿ ಹಬ್ಬಕ್ಕೂ ಒಂದು ದಿನ ಮುಂಚಿತವಾಗಿ ‘ತಬಾಹಿ’ ಹಾಡು ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಕಳೆದ 24 ಗಂಟೆಯಲ್ಲಿ 16.4 ಲಕ್ಷಕ್ಕೂ ಹೆಚ್ಚು ಜನರು ಈ ಹಾಡು ವೀಕ್ಷಣೆ ಮಾಡಿದ್ದಾರೆ.
‘ತಬಾಹಿ’ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ಬಾಲಿವುಡ್ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಸಂಗೀತ ಸಂಯೋಜನೆ ಮಾಡಿ ಸ್ವತಃ ಹಾಡಿದ್ದಾರೆ. ಚಿತ್ರದಲ್ಲಿ ಒಟ್ಟು ಆರು ಹಾಡುಗಳು ಇರಲಿವೆ ಎಂದು ತಿಳಿದು ಬಂದಿದೆ. 5 ವಿಭಿನ್ನ ಸಂಗೀತ ನಿರ್ದೇಶಕರು ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ವಿಶಾಲ್ ಮಿಶ್ರಾ ನಾಲ್ಕು ಹಾಡುಗಳಿಗೆ ಮ್ಯೂಸಿಕ್ ನೀಡಿದ್ದರೆ, ತನಿಷ್ಕ್ ಬಾಗ್ಜಿ ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಒಂದು ಹಾಡಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
‘ಟಾಕ್ಸಿಕ್’ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶಿಸಿದ್ದಾರೆ. ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು ಶೀಘ್ರದಲ್ಲೇ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.
—-





Be the first to comment