ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಗೌರಿ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.
ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ‘ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.
ಈಗಾಗಲೇ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿ ಬಂದಿವೆ ಎಂದು ಚಿತ್ರತಂಡ ತಿಳಿಸಿದೆ.
ನಾಯಕಿ ಆಗಿ ಸಾನ್ಯ ಅಯ್ಯರ್ ನಟಿಸಿದ್ದಾರೆ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಿರಿಯ ಛಾಯಾಗ್ರಾಹಕ ಕೆ.ಕೆ ಛಾಯಾಗ್ರಹಣ ಮಾಡಿದ್ದಾರೆ.
Be the first to comment