ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ ‘GST’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಕಬಿನಿ ಬಳಿಯ ಸಂದೇಶ್ ಅವರ ಹೊಸ ರೆಸಾರ್ಟ್ ನಲ್ಲಿ ನಾಯಕ ಸೃಜನ್ ಹಾಗೂ ನಾಯಕಿ ರಜನಿ ಭಾರದ್ವಾಜ್ ನಟಿಸಿದ ಹಾಡೊಂದರ ಚಿತ್ರೀಕರಣ ಹಾಗೂ ಮೈಸೂರಿನಲ್ಲಿ ಸೃಜನ್ ಲೋಕೇಶ್, ಸಂಹಿತ ವಿನ್ಯ, ತಬಲನಾಣಿ, ಗಿರೀಶ್ ಶಿವಣ್ಣ, ವಿನೋದ್ ಗೊಬ್ಬರಗಾಲ ಮುಂತಾದವರು ಅಭಿನಯಿಸಿದ ಮತ್ತೊಂದು ಹಾಡಿನ ಚಿತ್ರೀಕರಣ ನಡೆದಿದೆ. ಸೃಜನ್ ಲೋಕೇಶ್ ಹಾಗೂ ಚಂದನ್ ಶೆಟ್ಟಿ ಹಾಡುಗಳನ್ನು ಬರೆದಿದ್ದಾರೆ.
ಮುರುಗಾನಂದ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಎರಡು ಹಾಡುಗಳ ಚಿತ್ರೀಕರಣದೊಂದಿಗೆ “ಜಿ ಎಸ್ ಟಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಎರಡು ಹಾಡುಗಳಿಗೂ ಮುರುಗಾನಂದ ಅವರು ಹಾರಾರ್ ಕಾಮಿಡಿ ಜಾನರ್ ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಿಜಿ ಕಾರ್ಯ ನಡೆಯುತ್ತಿದೆ. ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.
‘GST’ ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ.
ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಮನೋರಂಜನೆಯೇ ಪ್ರಧಾನವಾಗಿರುವ “GST” ಚಿತ್ರಕ್ಕೆ “ಘೋಸ್ಟ್ ಇನ್ ಟ್ರಬಲ್” ಎಂಬ ಅಡಿಬರಹವಿದೆ.
ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರು.
Be the first to comment