ಶರಣ್ ನಟನೆಯ ‘ಗುರು ಶಿಷ್ಯರು’ ಸಿನಿಮಾದ ಟ್ರೈಲರ್ ಇಂದು ಬಿಡುಗಡೆ ಆಗಿದೆ.
ಚಿತ್ರ ಸೆಪ್ಟೆಂಬರ್ 23ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದೆ. ಶಿಕ್ಷಕರ ದಿನಾಚರಣೆಯ ದಿನ ರಿಲೀಸ್ ಆಗಿರುವ ಈ ಟ್ರೈಲರ್ ಸಾಕಷ್ಟು ವೀಕ್ಷಣೆ ಪಡೆಯುತ್ತಿದ್ದು, ನೋಡುಗರಿಂದ ಮೆಚ್ಚುಗೆ ಪಡೆಯುತ್ತಿದೆ.
ಸ್ಪೋರ್ಟ್ಸ್ ಡ್ರಾಮಾ ಆಧಾರಿತ ಈ ಚಿತ್ರದಲ್ಲಿ ಶರಣ್ ಖೋ ಖೋ ಕೋಚ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶರಣ್ ಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದಾರೆ. ಚಿತ್ರವನ್ನು ಜಡೇಶ ಕೆ ಹಂಪಿ ನಿರ್ದೇಶಿಸಿದ್ದಾರೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.
ಲಡ್ಡು ಸಿನಿಮಾಸ್ ಬ್ಯಾನರ್ ನಡಿ ಶರಣ್ ಹಾಗೂ ತರುಣ್ ಸುಧೀರ್ ‘ಗುರು ಶಿಷ್ಯರು’ ಸಿನಿಮಾ ನಿರ್ಮಾಣ ಮಾಡಿದ್ದಾರೆ.
____

Be the first to comment