ಚೆಕ್ ಬೌನ್ಸ್ ಪ್ರಕರಣ ಸಂಬಂಧ ನಿರ್ದೇಶಕ ಗುರುಪ್ರಸಾದ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಠ ಖ್ಯಾತಿಯ ಡೈರೆಕ್ಟರ್ ಅರೆಸ್ಟ್ ಆದ ಮೂರೇ ಗಂಟೆಯಲ್ಲಿ ಹೊರಗೆ ಬಂದಿದ್ದಾರೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು ಶುಕ್ರವಾರ ಗುರುಪ್ರಸಾದ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಗುರುಪ್ರಸಾದ್ ಅವರ ಜೊತೆ ಕೆಲಸ ಮಾಡಿದ್ದ ಶ್ರೀನಿವಾಸ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಗುರುಪ್ರಸಾದ್ ವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು.
ಗುರುಪ್ರಸಾದ್ ಈ ಹಿಂದೆ ಶ್ರೀನಿವಾಸ್ ಅವರಿಂದ 30 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಗುರುಪ್ರಸಾದ್ ಪಡೆದಿದ್ದ ಸಾಲವನ್ನು ಮರು ಪಾವತಿಸಿರಲಿಲ್ಲ. ಅಲ್ಲದೇ ಗುರುಪ್ರಸಾದ್ ಶ್ರೀನಿವಾಸ್ ಗೆ ನೀಡಿದ್ದ ಮೂರು ಚೆಕ್‌ಗಳು ಬೌನ್ಸ್ ಆಗಿದ್ದವು. ಈ ಕಾರಣದಿಂದ ಶ್ರೀನಿವಾಸ್ ನ್ಯಾಯಾಲಯದ ಮೊರೆ ಹೋಗಿದ್ದರು.
ನ್ಯಾಯಾಲಯ ಗುರುಪ್ರಸಾದ್ ಅವರಿ ಗೆ ವಾರಂಟ್ ಜಾರಿ ಮಾಡಿತ್ತು. ಆದರೆ ಗುರುಪ್ರಸಾದ್ ಕೋರ್ಟ್ ಗೆ ಹಾಜರಾಗದ ಕಾರಣ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದರು.
___
Be the first to comment