ತೆಲುಗಿನ ಎವರು ಚಿತ್ರದ ರೀಮೇಕ್ ಆಗಿರುವ ‘ಯದಾ ಯದಾ ಹಿ’ ಸಿನಿಮಾ ಮೂಲಕ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ತಮ್ಮ ಮದುವೆಯ ನಂತರ ಮೊದಲ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರ ಜೂನ್ 2 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಇಲ್ಲಿ ದಿಗಂತ್ ಕೂಡ ನಟಿಸಿದ್ದಾರೆ. ಚಿತ್ರದಲ್ಲಿ ದಿಗಂತ್ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ. ಹಿರಿಯ ನಟ ಅವಿನಾಶ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಜಾಕ್ ಮಂಜು ಅವರ ಶಾಲಿನಿ ಎಂಟರ್ಪ್ರೈಸಸ್ ವಿತರಿಸಲಿರುವ ಯದಾ ಯದಾ ಹಿ ಚಿತ್ರದ ಟ್ರೈಲರ್ ನ್ನು ಭಾನುವಾರ ನಡೆದ ಸಮಾರಂಭದಲ್ಲಿ ಅನಾವರಣಗೊಳಿಸಲಾಯಿತು. ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ಧ್ವನಿಯನ್ನು ಒಳಗೊಂಡ ಶೀರ್ಷಿಕೆ ಗೀತೆಯನ್ನು ಸಹ ಬಿಡುಗಡೆ ಮಾಡಲಾಗಿದೆ.
ತೆಲುಗು ನಿರ್ದೇಶಕ ಅಶೋಕ್ ತೇಜ ಈ ಚಿತ್ರದ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಗೈಸ್ ಅಂಡ್ ಡಾಲ್ಸ್ ಕ್ರಿಯೇಷನ್ಸ್ ಬ್ಯಾನರ್ ಮೂಲಕ ರಾಜೇಶ್ ಅಗರವಾಲ್ ಚಿತ್ರಕ್ಕೆ ಬೆಂಬಲ ನೀಡಿದ್ದಾರೆ.
ಚಿತ್ರವನ್ನು ಮುನ್ನಾರ್, ಚಿಕ್ಕಮಗಳೂರು, ಹೈದರಾಬಾದ್, ಕೇರಳ ಮತ್ತು ಬೆಂಗಳೂರಿನಲ್ಲಿ ಸುಮಾರು 55 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.
ಶ್ರೀಚರಣ್ ಪಾಕಳ ಮೂರು ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಯೋಗಿ ಅವರ ಛಾಯಾಗ್ರಹಣ ಮತ್ತು ಶ್ರೀಕಾಂತ್ ಅವರ ಸಂಕಲನ ಚಿತ್ರಕ್ಕಿದೆ.
___

Be the first to comment