ನಟ ಡಾಲಿ ಧನಂಜಯ್ ಅವರ ಡಾಲಿ ಪಿಚ್ಚರ್ಸ್ ಸಂಸ್ಥೆ ನಿರ್ಮಿಸಿರುವ ಬಹುನಿರೀಕ್ಷಿತ ಕನ್ನಡ ಚಿತ್ರ ಹೆಗ್ಗಣ ಮುದ್ದು ಚಿತ್ರದ ಟ್ರೇಲರ್ ಸೋಮವಾರ (ಸೆ.15) ಬಿಡುಗಡೆಯಾಗಿದೆ. ಸೆಪ್ಟೆಂಬರ್ 25ರಂದು ಹೆಗ್ಗಣ ಮುದ್ದು ಸಿನಿಮಾ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
“ಹೆತ್ತವರಿಗೆ ಹೆಗ್ಗಣ ಮುದ್ದು” ಎಂಬ ಜನಪ್ರಿಯ ಗಾದೆಮಾತಿನ ಆಧಾರದ ಮೇಲೆ ಈ ಚಿತ್ರಕ್ಕೆ “ಹೆಗ್ಗಣ ಮುದ್ದು” ಎಂದು ಶೀರ್ಷಿಕೆ ಇಡಲಾಗಿದೆ. ಇದು ಹೊಸದಾಗಿ ಮದುವೆ ಆದ ದಂಪತಿ ಸಂಬಂಧಗಳ ಸುತ್ತ ಹೆಣೆಯಲಾದ ಕೌಟುಂಬಿಕ ಡ್ರಾಮಾ ಮತ್ತು ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ.
ಈ ಚಿತ್ರದ ಮೂಲಕ ನವ ಪ್ರತಿಭೆ ಅವಿನಾಶ್ ಬಲೆಕ್ಕಳ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ಪೂರ್ಣ ಮೈಸೂರು (ಪೂರ್ಣಚಂದ್ರ ಮೈಸೂರು) ನಾಯಕನಾಗಿ ಅಭಿನಯಿಸಿದ್ದಾರೆ. ಇವರಿಗೆ ನಾಯಕಿಯಾಗಿ ಖ್ಯಾತ ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ ಅವರ ಪುತ್ರಿ ಅದಿತಿ ಸಾಗರ್ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ‘ವೇದ’ ಚಿತ್ರದಲ್ಲಿ ಕನಕ ಪಾತ್ರದ ಮೂಲಕ ಗಮನ ಸೆಳೆದಿದ್ದ ಅದಿತಿ, ಕೆಜಿಎಫ್ ಚಾಪ್ಟರ್ 2 ಸೇರಿದಂತೆ ಹಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಪ್ರಶಸ್ತಿ ಪಡೆದಿದ್ದಾರೆ. “ಹೆಗ್ಗಣ ಮುದ್ದು” ಮೂಲಕ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಾಯಕಿಯಾಗಿ ಮಿಂಚಲಿದ್ದಾರೆ.
ಹೆಗ್ಗಣ ಮುದ್ದು ಟ್ರೇಲರ್ ಫನ್ ಎಂಟರ್ಟೈನ್ಮೆಂಟ್ ಆಗಿದ್ದು ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುತ್ತಿದೆ. ಚಿತ್ರಕ್ಕೆ ಕಾರ್ತಿಕ್ ಚೆನ್ನೂಜಿ ರಾವ್ ಮತ್ತು ರೋಣದ ಬಕ್ಕೆಶ್ ಸಂಗೀತ ಸಂಯೋಜನೆ, ನಚಿಕೇತ್ ಬಲೆಕ್ಕಳಛಾಯಾಗ್ರಹಣವಿದೆ.





Be the first to comment