ಭಾರತೀಯ ಚಿತ್ರರಂಗದ ಪ್ರಮುಖ ನಟ ಹೃತಿಕ್ ರೋಷನ್ ಅವರೊಂದಿಗೆ ಹೊಂಬಾಳೆ ಫಿಲಂಸ್ ಹೊಸ ಚಿತ್ರವೊಂದನ್ನು ಘೋಷಿಸಿದೆ.
ಹೊಂಬಾಳೆ ಫಿಲಂಸ್ ಹೃತಿಕ್ ರೋಷನ್ ಅವರಂತಹ ಪ್ರತಿಭಾವಂತ ನಟರೊಂದಿಗೆ ಕೈಜೋಡಿಸಿದೆ. ದೇಶದ ಗಡಿಗಳನ್ನು ಮೀರಿ, ಪ್ರಪಂಚದಾದ್ಯಂತ ಕಥೆಗಳನ್ನು ತಲುಪಿಸುವ ಕನಸು ಕಂಡಿದೆ. ಹೊಂಬಾಳೆ ಫಿಲಂಸ್ ರಾಜಕುಮಾರ, ಯುವರತ್ನ, ಕೆಜಿಎಫ್, ಕಾಂತಾರ ಮತ್ತು ಬಘೀರಾದಂತಹ ಯಶಸ್ವಿ ಚಿತ್ರಗಳ ಮೂಲಕ ಕರ್ನಾಟಕದಲ್ಲಿ ಭದ್ರ ನೆಲೆ ಕಂಡುಕೊಂಡಿದೆ.
ಮೌಲ್ಯಯುತ ಕಥೆ ಮತ್ತು ಉತ್ತಮ ಮನರಂಜನೆ ನೀಡುವಲ್ಲಿ ಬದ್ಧವಾದ ಹೊಂಬಾಳೆ ಫಿಲಂಸ್ ಚಿತ್ರದ ನಿರ್ದೇಶಕರ ಕುರಿತ ಹೆಚ್ಚಿನ ಮಾಹಿತಿಗಳನ್ನು ಶೀಘ್ರದಲ್ಲೇ ಘೋಷಿಸಲಿದೆ.
ಹೃತಿಕ್ ರೋಷನ್ ಜೊತೆ ಕೈಜೋಡಿಸುವ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ನೀಡಿದೆ.
ಹೃತಿಕ್ ರೋಷನ್ ಅವರನ್ನು ಗ್ರೀಕ್ ಗಾಡ್ ಎಂದು ಹೇಳಲಾಗುತ್ತದೆ. ಅವರು ಸಾಕಷ್ಟು ಹೃದಯಗಳನ್ನು ಆಳಿದ್ದಾರೆ. ನಮ್ಮ ಬಳಗಕ್ಕೆ ಹೃತಿಕ್ ರೋಷನ್ ಅವರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಇನ್ನು ಮುಂದೆ ಹೃತಿಕ್ ರೋಷನ್ ಅವರೊಂದಿಗೆ ಬಿಗ್ ಬ್ಯಾಂಗ್ ಆರಂಭವಾಗಲಿದೆ ಎಂದು ಹೊಂಬಾಳೆ ಫಿಲಂಸ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.
—-

Be the first to comment