ಗೌರವ ಡಾಕ್ಟರೇಟ್ ಬೇಡ ಎಂದ ಕಿಚ್ಚ ಸುದೀಪ್

ನಟ ಕಿಚ್ಚ ಸುದೀಪ್‌ ತುಮಕೂರು ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್‌ ಪದವಿಯನ್ನು ತಿರಸ್ಕರಿಸಿದ್ದಾರೆ.

ಸುದೀಪ್‌ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ದೊಡ್ಡದು. ಇದರ ಜೊತೆಗೆ ಅವರು ಸಾಕಷ್ಟು ಸಮಾಜಮುಖಿ ಕೆಲಸವನ್ನು  ಮಾಡುತ್ತಿದ್ದಾರೆ. ಸುದೀಪ್‌ ಅವರ ಒಳ್ಳೆಯ ಕೆಲಸವನ್ನು ಗಮನಿಸಿ ತುಮಕೂರು ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್‌ ನೀಡಲು ಮುಂದಾಗಿತ್ತು. ಆದರೆ ಇದನ್ನು ಕಿಚ್ಚ ಸುದೀಪ್‌ ನಿರಾಕರಿಸಿದ್ದಾರೆ.

ಕಿಚ್ಚ ಸುದೀಪ್‌ಗೆ ಗೌರವ ಡಾಕ್ಟರೇಟ್‌ ನೀಡಲು ತುಮಕೂರು ವಿವಿ ನಿರ್ಧರಿಸಿ, ಸಿಂಡಿಕೇಟ್‌ ಸಭೆಯಲ್ಲಿ ಚರ್ಚೆ ನಡೆಸಿ ಸುದೀಪ್‌ ಗಮನಕ್ಕೆ ತರಲಾಗಿತ್ತು.

ವಿವಿ ನಿರ್ಧಾರಕ್ಕೆ ಹೃದಯಪೂರ್ವಕ ಧನ್ಯವಾದ ತಿಳಿಸಿರುವ ಸುದೀಪ್‌ ಅವರು ಇದನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. ಸೇವೆ ಮಾಡಿದ ನನಗಿಂತ ಹಿರಿಯರು ಇದ್ದಾರೆ. ಅವರಿಗೆ ಡಾಕ್ಟರೇಟ್‌ ನೀಡಿ ಎಂದು ಸುದೀಪ್‌ ಕೋರಿದ್ದಾರೆ. ಸುದೀಪ್‌  ನಡೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!