‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಮೊದಲ ಸಾಂಗ್ ರಿಲೀಸ್ ಆಗಿದೆ.
ಸ್ಯಾಂಡಲ್ ವುಡ್ ಸ್ಟಾರ್ ನಟರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧನಂಜಯ, ಧ್ರುವ ಸರ್ಜಾ ಚಿತ್ರದ ಮೊದಲ ಸಾಂಗ್ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.
‘ಪ್ರೊಟೆಸ್ಟ್ ಸಾಂಗ್’ ನಲ್ಲಿ ಹಾಸ್ಟೆಲ್ ನಲ್ಲಿರುವ ಹುಡುಗರ ಕಥೆ, ವ್ಯಥೆ ಇರುವ ಈ ಹಾಡನ್ನು ಸಖತ್ ಮಜವಾಗಿ ಕಟ್ಟಿಕೊಡಲಾಗಿದೆ. ಯೋಗರಾಜ್ ಭಟ್ ಸಾಹಿತ್ಯ, ಅಜನೀಶ್ ಲೋಕನಾಥ್ ಮ್ಯೂಸಿಕ್ ಇದಕ್ಕಿದೆ.
ಯೂತ್ ಸಬ್ಜೆಕ್ಟ್ ಒಳಗೊಂಡ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರಂಗಭೂಮಿ ನಟರು ಚಿತ್ರದಲ್ಲಿ ನಟಿಸಿದ್ದಾರೆ. ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಚಿತ್ರದಲ್ಲಿದೆ.
ಈ ಚಿತ್ರವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತ ಪಡಿಸುತ್ತಿದ್ದಾರೆ. ಫೆಬ್ರವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.
ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ. ಹಾಸ್ಟೆಲ್ ಹುಡುಗರು ಸಿನಿಮಾ ಸ್ಯಾಂಡಲ್ ವುಡ್ ಸಿನಿ ಪ್ರೇಕ್ಷಕರಲ್ಲಿ ಅಪಾರ ನಿರೀಕ್ಷೆ ಹುಟ್ಟು ಹಾಕಿದೆ.
___

Be the first to comment