ಡಾಲಿ ನಟನೆಯ 25ನೇ ಸಿನಿಮಾ ಹೊಯ್ಸಳದ ಟೀಸರ್ ಫೆಬ್ರವರಿ 5ರಂದು ಬೆಳಗ್ಗೆ 9.27ಕ್ಕೆ ಬಿಡುಗಡೆ ಆಗಲಿದೆ.
ಡಾಲಿ ಸಿನಿಮಾವನ್ನು ಕೆಆರ್‌ಜಿ ಸ್ಟುಡಿಯೋ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಾಣ ಮಾಡುತ್ತಿದ್ದಾರೆ. ವಿಜಯ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
ಚಿತ್ರದಲ್ಲಿ ಧನಂಜಯ ಹಾಗೂ ಅಮೃತ ಅಯ್ಯಂಗಾರ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಪ್ರಮುಖ ಪಾತ್ರದಲ್ಲಿದ್ದಾರೆ.
ಹೊಯ್ಸಳ’ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕಾರ್ತಿಕ್ ಎಸ್ ಕ್ಯಾಮರಾ, ಮಾಸ್ತಿ ಸಂಭಾಷಣೆ ಬರೆದಿದ್ದಾರೆ.
‘ಹೊಯ್ಸಳ’ ಸಿನಿಮಾ ಆಡಿಯೋ ಹಕ್ಕುಗಳು ದೊಡ್ಡ ಮೊತ್ತಕ್ಕೆ ಸೇಲ್ ಆಗಿದೆ. ಈ ಬಗ್ಗೆ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಆಗುತ್ತಿದೆ. ಇದು ಧನಂಜಯ್ ವೃತ್ತಿ ಬದುಕಿನಲ್ಲೇ ಹೊಸ ದಾಖಲೆ ಎಂದು ಹೇಳಲಾಗುತ್ತಿದೆ.
‘ಹೊಯ್ಸಳ’ ಮಾರ್ಚ್ 30ಕ್ಕೆ ರಿಲೀಸ್ ಆಗಲಿದೆ.
___





Be the first to comment