ಡಾಲಿ ಧನಂಜಯ ನಟನೆಯ 25ನೇ ಸಿನಿಮಾ ‘ಹೊಯ್ಸಳ’ದ ಟೀಸರ್ ಬಿಡುಗಡೆಯಾಗಿದೆ.
ವಿಜಯ್ ಎನ್. ನಿರ್ದೇಶಿಸಿರುವ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಚಿತ್ರದಲ್ಲಿ ಧನಂಜಯ್ ಮಿಂಚಿದ್ದಾರೆ. ಧನಂಜಯ ಅವರು ‘ಗುರುದೇವ್ ಹೊಯ್ಸಳ’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಕೆ.ಆರ್.ಜಿ ಸ್ಟುಡಿಯೊಸ್‌ನಡಿ ನಿರ್ಮಾಣವಾಗಿರುವ ಈ ಚಿತ್ರದ ಟೀಸರ್ ನ್ನು ‘ಕಿಚ್ಚ’ ಸುದೀಪ್, ಮಲಯಾಳಂನ ಪೃಥ್ವಿರಾಜ್ ಹಾಗೂ ತಮಿಳಿನ ಕಾರ್ತಿ ಬಿಡುಗಡೆ ಮಾಡಿದ್ದಾರೆ.
ಚಿತ್ರದಲ್ಲಿ ಧನಂಜಯ ಹಾಗೂ ಅಮೃತ ಅಯ್ಯಂಗಾರ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಪ್ರಮುಖ ಪಾತ್ರದಲ್ಲಿದ್ದಾರೆ.
ಹೊಯ್ಸಳ’ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕಾರ್ತಿಕ್ ಎಸ್ ಕ್ಯಾಮರಾ, ಮಾಸ್ತಿ ಸಂಭಾಷಣೆ ಬರೆದಿದ್ದಾರೆ.
ಸಿನಿಮಾ ಮಾ.30ರಂದು ಬಿಡುಗಡೆಯಾಗಲಿದೆ. ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ.
___





Be the first to comment