‘ಜೈಲರ್ 2’ಗೆ ಹೃತಿಕ್ ಎಂಟ್ರಿ?

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರದ ವಿಶೇಷ ಅತಿಥಿ ಪಾತ್ರಕ್ಕಾಗಿ ಬಾಲಿವುಡ್ ನಟ ಹೃತಿಕ್ ರೋಷನ್ ಅವರೊಂದಿಗೆ ಚಿತ್ರತಂಡ ಮಾತುಕತೆ ನಡೆಸುತ್ತಿದೆ.

ಅತಿಥಿಪಾತ್ರಕ್ಕಾಗಿ ಶಾರುಖ್ ಖಾನ್ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ ‘ಕಿಂಗ್’ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಇರುವ ಕಾರಣ ಶಾರುಖ್ ಈ ಆಫರ್ ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಹೃತಿಕ್ ರೋಷನ್ ಅವರನ್ನು ಈ ಪವರ್‌ಫುಲ್ ಪಾತ್ರಕ್ಕೆ ಕರೆತರಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ   ಹೊರ ಬಿದ್ದಿಲ್ಲ.

‘ಜೈಲರ್ 2’ ಚಿತ್ರದಲ್ಲಿ ರಜನಿಕಾಂತ್ ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಎಸ್.ಜೆ. ಸೂರ್ಯ ಹಾಗೂ ಸೂರಜ್  ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಮೊದಲ ಭಾಗದಂತೆ ಮೋಹನ್‌ಲಾಲ್ ಮತ್ತು ಶಿವರಾಜ್‌ಕುಮಾರ್ ‘ಜೈಲರ್ 2’ ಚಿತ್ರದಲ್ಲಿ ಇರಲಿದ್ದಾರೆ ಎನ್ನುವ ನಿರೀಕ್ಷೆ ಇದೆ.

ಚಿತ್ರದ ಬಿಡುಗಡೆಯ ದಿನಾಂಕ ಇನ್ನೂ ಅಧಿಕೃತವಾ ಗಿ ಘೋಷಣೆ  ಆ ಗಿಲ್ಲ. ಆದರೆ ಇದೇ ವರ್ಷ ಸೆಪ್ಟೆಂಬರ್ 11ರಂದು ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!