ವಿಭಿನ್ನ ಕಥೆಯ ಹುಬ್ಬಳ್ಳಿ ಡಾಬಾ ಚಿತ್ರ ನವೆಂಬರ್ 4 ರಂದು ತೆರೆಗೆ ಬರಲಿದೆ.
“ದಂಡುಪಾಳ್ಯ”, ” ಶಿವಂ” ಸೇರಿದಂತೆ ವಿಭಿನ್ನ ರೀತಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಅವರ ನಿರ್ದೇಶನದ 10ನೇ ಚಿತ್ರವಿದು. ನಿರ್ದೇಶಕರೇ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ.
ಭದ್ರಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಚರಣ್ ಅರ್ಜುನ್ ಸಂಗೀತ ನೀಡಿರುವ “ಹುಬ್ಬಳ್ಳಿ ಡಾಬಾ” ಚಿತ್ರದ ಹಾಡು ಆದಿತ್ಯ ಮ್ಯೂಸಿಕ್ ಮೂಲಕ ಈಗಾಗಲೇ ಬಿಡುಗಡೆಯಾಗಿದೆ. ಡಾ.ವಿ. ನಾಗೇಂದ್ರ ಪ್ರಸಾದ್ ಈ ಹಾಡನ್ನು ಬರೆದಿದ್ದಾರೆ. ಮೋಹನ ಭೋಗರಾಜು ಹಾಡಿರುವ ಈ ಹಾಡು ಮೆಚ್ಚುಗೆ ಪಡೆಯುತ್ತಿದೆ.
“ಹುಬ್ಬಳ್ಳಿ ಡಾಬಾ” ಚಿತ್ರ ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿದೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿದೆ.
ನವೀನ್ ಚಂದ್ರ, ದಿವ್ಯ ಪಿಳ್ಳೈ, ಅನನ್ಯ ಸೇನ್ ಗುಪ್ತ, ರವಿಶಂಕರ್, ರಾಜಾ ರವೀಂದರ್, ಅಯ್ಯಪ್ಪ ಶರ್ಮ, ನಾಗಾ ಬಾಬು, ಪೃಥ್ವಿ, ಪೂಜಾ ಗಾಂಧಿ, ರವಿ ಕಾಳೆ, ಪೆಟ್ರೋಲ್ ಪ್ರಸನ್ನ, ಡ್ಯಾನಿ ಕುಟ್ಟಪ್ಪ, ಮುನಿರಾಜು, ಜೈದೇವ್ ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ವೆಂಕಟ್ ಪ್ರಸಾದ್ ಛಾಯಾಗ್ರಹಣ, ಗ್ಯಾರಿ ಬಿ.ಹೆಚ್ ಸಂಕಲನ ಹಾಗೂ ವೆಂಕಟ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
___

Be the first to comment