ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ವರ್ಲ್ಡ್ ಸಿನಿಮಾ ‘ಟಾಕ್ಸಿಕ್’ ನಲ್ಲಿ ಹುಮಾ ಖುರೇಷಿ ಅವರ ಪಾತ್ರದ ಹೊಸ ಲುಕ್ ಬಿಡುಗಡೆಯಾಗಿದೆ.
ಹುಮಾ ಖುರೇಷಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ‘ಟಾಕ್ಸಿಕ್’ ಚಿತ್ರತಂಡ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶುಭಾಶಯ ತಿಳಿಸಿದೆ. ಚಿತ್ರದಲ್ಲಿ ಹುಮಾ ಖುರೇಷಿ ಅವರು ‘ಎಲಿಜಬೆತ್’ ಎಂಬ ವಿಭಿನ್ನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಹೊಸ ಪೋಸ್ಟರ್‌ನಲ್ಲಿ ಹುಮಾ ಖುರೇಷಿ ಗೌನ್ ಮಾದರಿಯ ಗ್ಲಾಮರಸ್ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿದೆ.
50-60ರ ದಶಕದ ಹಿನ್ನೆಲೆಯ ಕಥೆಯನ್ನು ಒಳಗೊಂಡಿರುವ ‘ಟಾಕ್ಸಿಕ್’ ಸಿನಿಮಾದಲ್ಲಿ ಹುಮಾ ಅವರ ಪಾತ್ರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಪೋಸ್ಟರ್‌ನಲ್ಲಿ ಅವರು ಕಪ್ಪು ಬಣ್ಣದ ವಿಂಟೇಜ್ ಕಾರಿನ ಪಕ್ಕದಲ್ಲಿ ಬ್ರಿಟಿಷ್ ರಾಣಿಯರ ಶೈಲಿಯ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು. ಆ ಲುಕ್ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿತ್ತು.
‘ಟಾಕ್ಸಿಕ್’ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ‘ಟಾಕ್ಸಿಕ್’ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ.
—–





Be the first to comment