ರಾಮ್ ಗೋಪಾಲ್ ವರ್ಮ ಮತ್ತು ಉಪೇಂದ್ರ ಕಾಂಬಿನೇಶನ್ ನ”I AM R” ಸಿನಿಮಾದ ಟೈಟಲ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು.
ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಶೀರ್ಷಿಕೆ ಬಿಡುಗಡೆ ಮಾಡಿ ಮಾತನಾಡಿದ ಸುದೀಪ್, ನನಗೆ ಈ ಸಮಾರಂಭಕ್ಕೆ ಬಂದ ಮೇಲೆ ನಾನು ಏಕೆ ಈ ಸಿನಿಮಾದಲ್ಲಿ ಇಲ್ಲ ಎಂದು ಅನಿಸುತ್ತಿದೆ. ನಾನು ನಾಯಕನಾಗಲು ಉಪೇಂದ್ರ ಕಾರಣ. ನಿರ್ದೇಶಕನಾಗಬೇಕೆಂದಿದ್ದ ನನಗೆ ನಾಯಕನಾಗಲು ಪ್ರೇರೇಪಿಸಿದೇ ಅವರು ಎಂದರು.
”ನನ್ನನ್ನು ಮುಂಬೈಗೆ ಕರೆದುಕೊಂಡು ಹೋಗಿ ಅಲ್ಲಿ ನನ್ನ ಸಿನಿಪಯಣ ಆರಂಭಿಸಿದ್ದು ಆರ್ ಜಿ ವಿ ಅವರು. ಇವರಿಬ್ಬರ ಕಾಂಬಿನೇಶನ್ ನ ಸಿನಿಮಾ ಉತ್ತಮ ಆಗಿ ಬರಲಿದೆ” ಎಂದರು.
ಉಪೇಂದ್ರ ಅವರು ಈಗಾಗಲೇ ನಿರ್ದೇಶನ ಹಾಗೂ ನಟನೆ ಎರಡರಲ್ಲೂ ಹೆಸರು ಮಾಡಿದ್ದಾರೆ. ಅವರೊಂದಿಗೆ ಕೆಲಸ ಮಾಡಲು ಖುಷಿಯಾಗುತ್ತಿದೆ. R ಎಂದರೆ ಏನು ಎಂಬುದನ್ನು ಈಗಲೇ ಹೇಳುವುದಿಲ್ಲ. ಟ್ರೇಲರ್ ಬಿಡುಗಡೆ ಸಮಯದಲ್ಲಿ ಹೇಳುತ್ತೇನೆ. ಒಟ್ಟಿನಲ್ಲಿ ನಮ್ಮಿಬ್ಬರಿಂದ ಉತ್ತಮ ಚಿತ್ರ ಬರಲಿದೆ ಎಂದು ರಾಮ ಗೋಪಾಲ್ ವರ್ಮ ಹೇಳಿದರು.
ನಾನು ಆರ್ ಜಿ ವಿ ಅವರ “ಶಿವ” ಸಿನಿಮಾ ನೋಡಿ, “ಓಂ” ಚಿತ್ರ ಮಾಡಬೇಕೋ? ಬೇಡವೋ? ಎಂದು ಯೋಚಿಸಿದ್ದೆ. ಒಳ್ಳೆಯ ಚಿತ್ರಗಳನ್ನು ನೀಡಿರುವ ಆರ್ ಜಿ ವಿ ಸರ್ ಅವರ ಜೊತೆ ಕೆಲಸ ಮಾಡುತ್ತಿರುವುದು ಸಂತಸ ತಂದಿದೆ. ನೈಜಘಟನೆ ಆಧಾರಿತ ಚಿತ್ರವಿದು. ಅವರು ಹೇಳಿದಂತೆ ಉತ್ತಮ ಚಿತ್ರ ಆಗಿ ಹೊರಹೊಮ್ಮುವ ವಿಶ್ವಾಸವಿದೆ ಎಂದು ಉಪೇಂದ್ರ ಹೇಳಿದರು.
ನಿರ್ಮಾಪಕ ರಾಜ್ ಯಜಮಾನ್ ಸೇರಿದಂತೆ ಹಲವು ಗಣ್ಯರು ಇದ್ದರು.
___






Be the first to comment