ಹತ್ತನೇ ವರ್ಷದ IIFTC ಪ್ರಶಸ್ತಿ ಸಮಾರಂಭದಲ್ಲಿ ಈ ವರ್ಷ ಎರಡು ಕನ್ನಡ ಚಿತ್ರಗಳಿಗೆ ಅತ್ಯುತ್ತಮ ವಿದೇಶಿ ಚಿತ್ರೀಕರಣ ಪ್ರಶಸ್ತಿ ದೊರೆಕಿದೆ.
ʻʻಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಗಾಳಿಪಟ 2’ ಮತ್ತು ‘ರೇಮೊ’ʼ ಚಿತ್ರಗಳಿಗೆ ಅತ್ಯುತ್ತಮ ವಿದೇಶಿ ಚಿತ್ರೀಕರಣ ಪ್ರಶಸ್ತಿ ಸಿಕ್ಕಿದೆ ಎಂದು ಪವನ್ ಒಡೆಯರ್ ಅವರು ಗಾಳಿಪಟ 2 ನಿರ್ಮಾಪಕ ಎಂ. ರಮೇಶ್ ರೆಡ್ಡಿ ಜತೆ ಫೋಟೊ ಹಂಚಿಕೊಂಡಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಯೋಗರಾಜ್ ಭಟ್ ಕಾಂಬಿನೇಷನ್‌ನಲ್ಲಿ ಮೂಡಿ ಬಂದ ಗಾಳಿಪಟ 2 ಸಿನಿಮಾ 2022ರ ಆಗಸ್ಟ್ 12ರಂದು ತೆರೆ ಕಂಡಿತ್ತು. ಈ ಸಿನಿಮಾ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿತ್ತು.
ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದೂದ್ ಪೇಡ ದಿಗಂತ್ ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ನಟಿಸಿದ್ದರು. ಸೂರಜ್ ಪ್ರೊಡಕ್ಷನ್ ಅಡಿಯಲ್ಲಿ ಉಮಾ ಎಂ. ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದರು.
ಹಿರಿಯ ನಟ ಅನಂತ್ ನಾಗ್ ಕನ್ನಡ ಮೇಷ್ಟ್ರು ಪಾತ್ರದಲ್ಲಿ ಬಣ್ಣ ಹಚ್ಚಿದ್ದರು. ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಸಂಯುಕ್ತಾ, ನಿಶ್ವಿಕಾ ನಾಯ್ಡು ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.
ಪವನ್ ಒಡೆಯರ್ ನಿರ್ದೇಶನ, ಇಶಾನ್ ಹಾಗೂ ಆಶಿಕಾ ರಂಗನಾಥ್ ನಟನೆಯ ‘ರೇಮೊ’ ಸಿನಿಮಾದಲ್ಲಿ ಶರತ್ ಕುಮಾರ್, ರಾಜೇಶ್ ನಟರಂಗ, ಅಚ್ಯುತ್ ಕುಮಾರ್, ಮಧು ನಟಿಸಿದ್ದರು.
ಜಯಾದಿತ್ಯ ಬ್ಯಾನರ್ ನಡಿ ಸಿ. ಆರ್. ಮನೋಹ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸಿ. ಆರ್ ಗೋಪಿ ಸಹ ನಿರ್ಮಾಣವಿದೆ. ವೈದಿ ಕ್ಯಾಮೆರಾ ವರ್ಕ್, ಕೆ.ಎಂ. ಪ್ರಕಾಶ್ ಸಂಕಲನ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
____

Be the first to comment