ಬಾಲಿವುಡ್ ಸ್ಟಾರ್ ಸುನೀಲ್ ಶೆಟ್ಟಿ, ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಜೈ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ.
‘ಜೈ’ ಸಿನಿಮಾ ನವೆಂಬರ್ 14ರಂದು ತೆರೆಗೆ ಬರಲಿದೆ. ಅದಕ್ಕೂ ಮುನ್ನ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ. ರೂಪೇಶ್ ಶೆಟ್ಟಿ ಅವರು ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
“ಬಾಲಿವುಡ್ನ ಅಣ್ಣ ಸುನೀಲ್ ಶೆಟ್ಟಿ ನಮ್ಮ ಬೆಂಗಳೂರಿಗೆ ಬರುತ್ತಿದ್ದಾರೆ. ಅವರು ನವೆಂಬರ್ 7ರಂದು ಮಂತ್ರಿ ಮಾಲ್ನಲ್ಲಿ ‘ಜೈ’ ಟ್ರೇಲರ್ ಲಾಂಚ್ನಲ್ಲಿ ಭಾಗವಹಿಸಲಿದ್ದಾರೆ,” ಎಂದು ರೂಪೇಶ್ ಶೆಟ್ಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಇತ್ತೀಚೆಗಷ್ಟೇ ಮಸ್ಕಟ್ನಲ್ಲಿ ಚಿತ್ರದ ಅಂತರಾಷ್ಟ್ರೀಯ ಪ್ರೀಮಿಯರ್ ಶೋ ನಡೆದಿದೆ. ಅಲ್ಲಿ ಪ್ರೇಕ್ಷಕರು ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸುನೀಲ್ ಶೆಟ್ಟಿ ಈ ಚಿತ್ರದಲ್ಲಿ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಾರಣದಿಂದ ಸಿನಿಮಾದ ಮೇಲೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
ಜೈ’ ಚಿತ್ರದಲ್ಲಿ ರೂಪೇಶ್ ಶೆಟ್ಟಿ ಜೊತೆಗೆ ಅದ್ವಿತಿ ಶೆಟ್ಟಿ, ಅರವಿಂದ್ ಬೋಳಾರ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ. ಪಡೀಲ್, ದೇವದಾಸ್ ಕಾಪಿಕಾಡ್ ಮುಂತಾದವರು ನಟಿಸಿದ್ದಾರೆ. ಸಿನಿಮಾ ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
—-





Be the first to comment