ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಒಟಿಟಿ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ.
ಸೆಪ್ಟೆಂಬರ್ 7ರಂದು ಅಮೆಜಾನ್ ಪ್ರೈಂನಲ್ಲಿ ತಮಿಳು, ತೆಲುಗು, ಕನ್ನಡ, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಜೈಲರ್ ಸಿನಿಮಾ ಸ್ಟ್ರೀಮ್ ಆಗಲಿದೆ.
ತನ್ನ ಮಗನ ಕೊಲೆ ಮಾಡಿದವರನ್ನು ಹುಡುಕುತ್ತಾ ಹೋಗುವ ನಿವೃತ್ತ ಜೈಲರ್ ಟೈಗರ್ ಮುಡುವೇಲ್ ಪಾಂಡಿಯನ್ ಕಥೆ ಇದೆ. ನರಸಿಂಹನ ಪಾತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅದ್ಭುತವಾಗಿ ನಟಿಸಿದ್ದಾರೆ.
‘ಜೈಲರ್’ ಚಿತ್ರಮಂದಿರಗಳಲ್ಲಿ ಅಗಸ್ಟ್ 11ರಂದು ಬಿಡುಗಡೆಗೊಂಡಿತ್ತು. ಈ ಚಿತ್ರದ ಮೂಲಕ 2 ವರ್ಷದ ನಂತರ ರಜನಿಕಾಂತ್ ಮಾಸ್ ಚಿತ್ರದ ಮೂಲಕ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದರು. ಜೈಲರ್ ಚಿತ್ರ ಕೌಟುಂಬಿಕ ಕಥಾಹಂದರವನ್ನು ಹೊಂದಿದೆ.
ಈ ಹಿಂದೆ ನೆಟ್ ಫ್ಲಿಕ್ಸ್ ಮತ್ತು ಸನ್ ನೆಕ್ಸ್ಟ್ ಒಟಿಟಿಯಲ್ಲಿ ಜೈಲರ್ ಸಿನಿಮಾ ಸ್ಟ್ರೀಮಿಂಗ್ ಆಗಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಜೈಲರ್ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ ಎಂದು ಸ್ವತಃ ಪ್ರೈಂ ಅಧಿಕೃತ ಘೋಷಣೆ ಮಾಡಿದೆ.
___

Be the first to comment