ಸೂಪರ್‌ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಜೊತೆ ವಿಜಯ್ ದೇವರಕೊಂಡ ಅಭಿನಯದ ‘ರಣಬಾಲಿ’ ಪೈಪೋಟಿ ನಡೆಸಲಿದೆ.
ರಣಬಾಲಿ’ ಚಿತ್ರದ ಹೊಸ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಈ ಹಿಂದೆ ಸೆಪ್ಟೆಂಬರ್ 11ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ಕೆಲ ಕಾರಣಗಳಿಂದ ಮುಂದೂಡಲ್ಪಟ್ಟಿತ್ತು. ರಾಹುಲ್ ಸಂಕೃತ್ಯನ್ ನಿರ್ದೇಶನದ ಈ ಚಿತ್ರ ಅಕ್ಟೋಬರ್ 16ರಂದು ವಿಶ್ವಾದ್ಯಂತ ತೆರೆಕಾಣಲಿದೆ.
ಪ್ಯಾನ್ ಇಂಡಿಯಾ ಆಕ್ಷನ್ ಡ್ರಾಮಾ ಸಿನಿಮಾವನ್ನು 19ನೇ ಶತಮಾನದ ಹಿನ್ನೆಲೆಯಲ್ಲಿ ರೂಪಿಸಲಾಗಿದೆ. ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ 1854ರಿಂದ 1878ರ ನಡುವೆ ನಡೆದ ನೈಜ ಐತಿಹಾಸಿಕ ಘಟನೆಗಳನ್ನು ಆಧರಿಸಿ ಕಥೆಯನ್ನು ಸಿದ್ಧಪಡಿಸಲಾಗಿದೆ. ಸಿನಿಮಾದಲ್ಲಿ ವಿಜಯ್ ದೇವರಕೊಂಡಗೆ ಜೋಡಿಯಾಗಿ ವಿಜಯ್ ಪತ್ನಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹೆಸರಾಂತ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಟಿ-ಸೀರೀಸ್ ಚಿತ್ರವನ್ನು ಪ್ರಸ್ತುತಪಡಿಸುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾದ ಗ್ಲಿಂಪ್ಸ್ ಹಾಗೂ ಹಾಡುಗಳು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿವೆ.
ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಸಂಪೂರ್ಣ ಮುಗಿದಿದೆ. ಶಿವರಾಜ್‌ಕುಮಾರ್, ರಮ್ಯಾ ಕೃಷ್ಣನ್ ಸೇರಿದಂತೆ ದೊಡ್ಡ ತಾರಾಗಣ ಸಿನಿಮಾದಲ್ಲಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಸಿನಿಮಾ ಅಕ್ಟೋಬರ್ 15 ರಂದು ಬಿಡುಗಡೆಯಾಗಲಿದೆ.
—





Be the first to comment