ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ.
ರಜನಿಕಾಂತ್ ತಮ್ಮ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಸ್ತುತ ‘ಧರ್ಮನ್’ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಕಮಲ್ ಹಾಸನ್ ಅವರೊಂದಿಗೆ ನಟಿಸುತ್ತಿರುವ ಹೊಸ ಸಿನಿಮಾದ ಕುರಿತಾಗಿಯೂ ರಜನಿಕಾಂತ್ ಅಪ್ಡೇಟ್ ನೀಡಿದ್ದಾರೆ.
ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಸಂಪೂರ್ಣ ಮುಗಿದಿದೆ. ಅನಿರುದ್ಧ್ ರವಿಚಂದರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಶಿವರಾಜ್‌ಕುಮಾರ್, ರಮ್ಯಾ ಕೃಷ್ಣನ್ ಸೇರಿದಂತೆ ದೊಡ್ಡ ತಾರಾಗಣ ಈ ಸಿನಿಮಾದಲ್ಲಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಸಿನಿಮಾ ಅಕ್ಟೋಬರ್ 15 ರಂದು ಬಿಡುಗಡೆಯಾಗಲಿದೆ.
ರಜನಿಕಾಂತ್ ಮುಂದಿನ ಸಿನಿಮಾ ‘ಧರ್ಮನ್’ ಪ್ರಸ್ತುತ ಎರಡನೇ ಹಂತದ ಶೂಟಿಂಗ್‌ನಲ್ಲಿದೆ. ಆಶ್ವಿನ್ ಮಾರಿಮುತ್ತು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ಸ್ ಮತ್ತು ರೆಡ್ ಜೈಂಟ್ ಸಂಸ್ಥೆಗಳು ಜಂಟಿಯಾಗಿ ಚಿತ್ರವನ್ನು ನಿರ್ಮಿಸುತ್ತಿವೆ. ಸಿನಿಮಾದಲ್ಲಿ ರಜನಿಕಾಂತ್ ವೈದ್ಯನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿಮ್ರಾನ್ ನಾಯಕಿಯಾಗಿದ್ದಾರೆ.
ರಜನಿಕಾಂತ್ ಮತ್ತು ಕಮಲ್ ಹಾಸನ್ ಬಹುವರ್ಷಗಳ ನಂತರ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶಿಸಲಿದ್ದಾರೆ. ಈ ಇಬ್ಬರು ನಟರು ಸುಮಾರು 40 ವರ್ಷಗಳ ಸುದೀರ್ಘ ವಿರಾಮದ ನಂತರ ಒಂದಾಗುತ್ತಿದ್ದಾರೆ. ಈ ಪ್ರಾಜೆಕ್ಟ್‌ಗೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
—-





Be the first to comment