ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸಿರುವ ” ಜಲಂಧರ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ ಪ್ರೊಡಕ್ಷನ್ ಕಾರ್ಯ ಬಿರುಸಿನಿಂದ ಸಾಗಿದೆ. ಇತ್ತೀಚೆಗೆ ನಡೆದ ಪ್ರಮೋದ್ ಶೆಟ್ಟಿ ಅವರ ಹುಟ್ಟುಹಬ್ಬದಂದು ಈ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಗಿದ್ದು, ಜನಪ್ರಿಯವಾಗಿದೆ.
ವಿಷ್ಣು ವಿ ಪ್ರಸನ್ನ ಚೊಚ್ಚಲ ನಿರ್ದೇಶನದ ಈ ಚಿತ್ರ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಕಾವೇರಿ ನದಿದಡದ ಮಧುವತ್ತಿ ಎಂಬ ಊರಿನಲ್ಲಿ ಈ ಚಿತ್ರದ ಕಥೆ ತೆರೆದುಕೊಳ್ಳುತ್ತದೆ. ಲೋಕೇಶ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಸ್ಟೆಪ್ ಅಪ್ ಪಿಕ್ಚರ್ಸ್ ಲಾಂಛನದಲ್ಲಿ ಮದನ್ ಎಸ್ ನಿರ್ಮಾಣ ಮಾಡುತ್ತಿದ್ದಾರೆ. ಚಂದ್ರ ಮೋಹನ್, ರಾಮಚಂದ್ರ ಹಾಗೂ ಪದ್ಮನಾಭನ್ ಸಹ ನಿರ್ಮಾಪಕರಾಗಿದ್ದಾರೆ. ಮುತ್ತತ್ತಿ, ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆದಿದೆ.
ಪ್ರಮೋದ್ ಶೆಟ್ಟಿ, ಲೋಕೇಶ್ ಗೌಡ, ರಘು ರಮಣಕೊಪ್ಪ, ಬಾಲ ರಾಜವಾಡಿ, ರಿಶಿಕಾ ರಾಜ್, ಆರೋಹಿತ ಗೌಡ, ನವೀನ್ ಸಾಗರ್, ಪ್ರತಾಪ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸರಿನ್ ರವೀಂದ್ರನ್ ಹಾಗೂ ವಿದ್ಯಾಶಂಕರ್ ಛಾಯಾಗ್ರಹಣ, ಜತಿನ್ ದರ್ಶನ್ ಸಂಗೀತ ನಿರ್ದೇಶನ ಹಾಗೂ ವೆಂಕಿ ಯು ಡಿ ವಿ ಸಂಕಲನ “ಜಲಂಧರ” ಚಿತ್ರಕ್ಕಿದೆ.

ಪ್ರಮೋದ್ ಶೆಟ್ಟಿ ಅಭಿನಯದ ‘ಜಲಂಧರ’
Post Views:
292
Be the first to comment