ಮಾ.13ರಂದು ಜೇಮ್ಸ್ ಪ್ರಿ-ರಿಲೀಸ್ ಈವೆಂಟ್

ಅಪ್ಪು ಅಭಿನಯದ ಕೊನೆಯ ಸಿನಿಮಾಕ್ಕಾಗಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಪ್ರಿ-ರಿಲೀಸ್ ಈವೆಂಟ್ ಹಮ್ಮಿಕೊಳ್ಳಲಾಗಿದೆ.

ಮಾರ್ಚ್ 13ರಂದು ಅದ್ದೂರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಲವು ದಿನಗಳಿಂದ ಈ ಕಾರ್ಯಕ್ರಮದ ಬಗ್ಗೆ ಸುದ್ದಿ ಹರಿದಾಡುತ್ತಿತ್ತು. ಚಿತ್ರತಂಡ ಅಭಿಮಾನಿಗಳಿಗಾಗಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಸುತ್ತಿದೆ. ಮಾರ್ಚ್ 17ರಂದು ಪುನೀತ್ ಹುಟ್ಟುಹಬ್ಬದಂದೇ ‘ಜೇಮ್ಸ್’ ಬಿಡುಗಡೆಯಾಗಲಿದೆ.

ಕಾರ್ಯಕ್ರಮದಲ್ಲಿ ಶಿವರಾಜ್‌ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಶ್ರೀಮುರಳಿ, ಯುವ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್, ಧೀರೇನ್ ರಾಮ್ ಕುಮಾರ್ ಆಗಮಿಸುವ ಸಾಧ್ಯತೆ ಇದೆ. ಇವರೊಂದಿಗೆ ಸ್ಯಾಂಡಲ್‌ವುಡ್ ಗಣ್ಯರು ಕೂಡ ಭಾಗವಹಿಸಲಿದ್ದಾರೆ.

ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿರುವ ‘ಜೇಮ್ಸ್​​’ಗೆ ಕಿಶೋರ್ ಪತ್ತಿಕೊಂಡ ಬಂಡವಾಳ ಹೂಡಿದ್ದಾರೆ. ಪ್ರಿಯಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಶರತ್ ಕುಮಾರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಸುಚೇಂದ್ರ ಪ್ರಸಾದ್ ಮೊದಲಾದವರು ಬಣ್ಣಹಚ್ಚಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಜೇಮ್ಸ್ ರಿಲೀಸ್ ಆಗಲಿದೆ.

ಜೇಮ್ಸ್’ನಲ್ಲಿ ನಾಯಕಿಯಾಗಿ ತಮಿಳು ನಟಿ ಪ್ರಿಯಾ ಆನಂದ್ ನಟಿಸಿದ್ದಾರೆ. ‘ರಾಜಕುಮಾರ’ ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ ಹಿರಿಯ ತಮಿಳು ನಟ ಶರತ್ ಕುಮಾರ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಎ. ಹರ್ಷ ಕೊರಿಯೋಗ್ರಫಿ, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿ ನಿರ್ದೇಶಿಸಿದ್ದಾರೆ. ಕಿಶೋರ್ ಪತಿಕೊಂಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಶ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ, ದೀಪು ಎಸ್‌.ಕುಮಾರ್‌ ಸಂಕಲನ ಇದೆ.

ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣ ನಟಿಸಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!